
ದೆಹಲಿ:ಭೂಗತ ಪಾತಕಿ ರಾಜೇಂದ್ರ ನಿಕಲ್ಜೆ ಅಲಿಯಾಸ್ ಛೋಟಾ ರಾಜನ್, ಅನಾರೋಗ್ಯ ನಿಮಿತ್ತ ಇಂದು ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದಾನೆ.
ಇದನ್ನೂ ಓದಿ:ಛೋಟಾ ರಾಜನ್ ಇನ್ನೂ ಸತ್ತಿಲ್ಲ, ಬದುಕಿದ್ದಾನೆ ಎಂದ ದೆಹಲಿ ಏಮ್ಸ್​ ವೈದ್ಯರು!
ಬೆಳಗ್ಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಏಪ್ರಿಲ್​​ನಲ್ಲಿ ಕರೊನಾ ಪಾಸಿಟಿವ್ ದೃಢಪಟ್ಟ ಕಾರಣ ಇದೇ ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದನು.
ಭೂಗತ ಪಾತಕಿ ಛೋಟಾ ರಾಜನ್​ಗೆ ಕರೊನಾ ಪಾಸಿಟಿವ್​, ಆಸ್ಪತ್ರೆಗೆ ದಾಖಲು
2015 ರಲ್ಲಿ ಇಂಡೋನೇಷ್ಯಾದ ಬಾಲಿ ಎಂಬಲ್ಲಿ 61 ವರ್ಷದ ರಾಜನ್ ಬಂಧನವಾಗಿತ್ತು. ನಂತರ ಭದ್ರತೆಯೊಂದಿಗೆ ದೆಹಲಿ ತಿಹಾರ್ ಜೈಲಿನಲ್ಲಿ ಇಡಲಾಗಿತ್ತು.ಈತನ ಮೇಲೆ ಮುಂಬೈನಲ್ಲಿ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. 2011 ರ ಪತ್ರಕರ್ತ ಜೋತಿರ್ಮೊ ದೇ ಹತ್ಯೆ ಪ್ರಕರಣದ ಅಪರಾಧಿಯಾಗಿ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾನೆ.(ಏಜೆನ್ಸೀಸ್)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
