ನವದೆಹಲಿ:ಕಳೆದ ವರ್ಷದಿಂದ ಕಾಡಲಾರಂಭಿಸಿದ ಕರೊನಾ, ಅದರ ನಿಯಂತ್ರಣಕ್ಕಾಗಿ ಹೇರಿದ್ದ ಲಾಕ್​ಡೌನ್​ ಎರಡೂ ಸೇರಿ ಕಳೆದ ವರ್ಷವೇ ಅಸಂಖ್ಯಾತ ಜನರು ಕೆಲಸ ಕಳೆದುಕೊಂಡಿದ್ದರು. ಆ ಬಳಿಕ ಕರೊನಾ ಹಾವಳಿ ಇನ್ನೇನು ತಗ್ಗಿತು ಎಂಬಷ್ಟರಲ್ಲಿ ಅದರ ಎರಡನೇ ಅಲೆ ಮತ್ತಷ್ಟು ತೀವ್ರವಾಗಿ ಬೀಸಿದ್ದು, ಜನಜೀವನವನ್ನು ಇನ್ನಷ್ಟು ಅಲ್ಲೋಲ-ಕಲ್ಲೋಲ ಆಗಿಸಿದೆ.
ಬೇಸರದ ಸಂಗತಿ ಎಂದರೆ ಈಗಾಗಲೇ ಕೆಲಸ ಕಳೆದುಕೊಂಡವರೇ ಮುಂದೇನು, ಯಾವ ಕೆಲಸ ಎಂಬ ಚಿಂತೆಯಲ್ಲಿರುವಾಗಲೇ ಕರೊನಾ ಎರಡನೇ ಅಲೆಯ ನಿಯಂತ್ರಣಕ್ಕಾಗಿ ಅಲ್ಲಲ್ಲಿ ಲಾಕ್​ಡೌನ್​, ಕರ್ಫ್ಯೂ ಹೇರಲಾಗಿದೆ. ಪರಿಣಾಮವಾಗಿ ಕೈಗಾರಿಕೆ, ವ್ಯಾಪಾರ ಚಟುವಟಿಕೆ ಮೇಲೆ ಭಾರಿ ಹೊಡೆತ ಬಿದ್ದಿದ್ದು, ಇದು ಮತ್ತೊಂದು ಹಂತದ ಉದ್ಯೋಗ ನಷ್ಟಕ್ಕೆ ಕಾರಣವಾಗಿದೆ.
ಇದನ್ನೂ ಓದಿ:‘ಆಕ್ಸಿಜನ್ ಲೆವೆಲ್ 74, ಯಾವ ಆಸ್ಪತ್ರೆಯಲ್ಲೂ ಕರೆ ಸ್ವೀಕರಿಸ್ತಿಲ್ಲ.. ಪ್ಲೀಸ್ ಹೆಲ್ಪ್​ ಮಾಡಿ’: ಭಾರತದಲ್ಲಿರುವ ತಂದೆಗಾಗಿ ಅಮೆರಿಕದಲ್ಲಿರುವ ಪುತ್ರಿಯ ಮನವಿ
ಭಾರತದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಗರಿಷ್ಠ ಎಂಬಷ್ಟು ಉದ್ಯೋಗ ನಷ್ಟ ಸಂಭವಿಸಿದ್ದು, ಲಕ್ಷಾಂತರ ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಮಾರ್ಚ್​ನಲ್ಲಿ ಶೇ. 6.5ರಷ್ಟಿದ್ದ ನಿರುದ್ಯೋಗ ಪ್ರಮಾಣ ಏಪ್ರಿಲ್​ನಲ್ಲಿ ಶೇ. 7.97ಕ್ಕೆ ತಲುಪಿದೆ. ಅರ್ಥಾತ್ ಒಂದೇ ತಿಂಗಳಲ್ಲಿ 70 ಲಕ್ಷಕ್ಕೂ ಅಧಿಕ ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಸೆಂಟರ್ ಫಾರ್​ ಮಾನಿಟರಿಂಗ್ ಇಂಡಿಯನ್ ಎಕಾನಮಿ ಎಂಬ ಖಾಸಗಿ ಅಧ್ಯಯನ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಈ ವಿಷಯ ಕಂಡುಬಂದಿದೆ.
ಚಾಮರಾಜನಗರದಲ್ಲಿ ಸತ್ತದ್ದು 24 ಅಲ್ಲ, 34 ಮಂದಿ! ಅಧಿಕಾರಿಗಳು ಮಾಹಿತಿ ಮುಚ್ಚಿಟ್ಟಿದ್ದಾರೆ…

ಡಿಸೆಂಬರ್‌ವರೆಗೂ ಇರುತ್ತೆ ಈ ಕರೊನಾ ಕಾಟ: ಎಚ್ಚರಿಕೆ ನೀಡಿದ ಡಾ. ಮಂಜುನಾಥ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
