ರಾಂಚಿ:ಮನೆ ಕಟ್ಟಿ ನೋಡು ಒಮ್ಮೆ ಮದುವೆ ಮಾಡಿ ನೋಡು ಎನ್ನುತ್ತಾರೆ. ಇವೆರಡು ಜೀವನದ ಪ್ರಮುಖ ಘಟ್ಟವಾಗಿದ್ದು ನಮ್ಮ ಜೀವನದಲ್ಲಿ ಶಾಶ್ವತವಾಗಿ ನೆನಪುಳಿಯುತ್ತವೆ.
ಇನ್ನು ಶುಭ ಸಮಾರಂಭದ ವೇಳೆ ಕೆಲ ಅಹಿತಕರ ಹಾಗೂ ಕಹಿ ಘಟನೆಗಳು ಸಹ ನಡೆಯುತ್ತವೆ ಅದಕ್ಕೆ ಪೂರಕವೆಂಬಂತೆ ಜಾರ್ಖಂಡ್​ನ ರಾಂಚಿಯಲ್ಲಿ ನಡೆದಿದೆ.
ಮಂಗಳವಾರ ಸಂಜೆ ಮುಫಾಸಿಲ್​ ಠಾಣೆ ವ್ಯಾಪ್ತಿಯ ಪಟರೋಡಿ ಪ್ರದೇಶದಲ್ಲಿ ಶಂಕರ್​ ಯಾದವ್​ ಎಂಬುವವರ ಮದುವೆ ಕಾರ್ಯಕ್ರಮಕ್ಕೆ ತಡರಾತ್ರಿ ಆಗಮಿಸಿದ ಯುವಕರ ಗುಂಪೊಂದು ಆಹಾರದ ವಿಚಾರವಾಗಿ ಗಲಾಟೆ ಮಾಡಿದ್ದು ಇದು ದೊಡ್ಡ ಮಟ್ಟದ ಹೊಡೆದಾಟಕ್ಕೆ ಕಾರಣವಾಗಿದೆ.
ಇದನ್ನೂ ಓದಿ:ಕಳ್ಳತನ ಶಂಕೆ; ವಿದ್ಯಾರ್ಥಿನಿಯರನ್ನು ವಿವಸ್ತ್ರಗೊಳಿಸಿದ ಹಾಸ್ಟೆಲ್​ ವಾರ್ಡನ್​
ಮದುವೆ ಮನೆಗೆ ನುಗ್ಗಿದ ಯುವಕರ ತಂಡವೊಂದು ಊಟ ಮಾಡುವ ವೇಳೆ ತಮಗೆ ಬಿಸಿ ಬಿಸಿ ಪೂರಿ ಬೇಕು ಎಂದು ಗಲಾಟೆ ತೆಗೆದಿದ್ದಾರೆ. ಮದುವೆ ಮನೆಯಲ್ಲಿ ಇವರ ಮಾತಿಗೆ ಯಾರು ಸೊಪ್ಪು ಹಾಕದ ಕಾರಣ ಪೋನ್​ ಮಾಡಿ ಮತ್ತೊಂದು ಗುಂಪನ್ನು ಕರೆಸಿಕೊಂಡಿದ್ದಾರೆ.
ಬಳಿಕ ಮದುವೆ ಮನೆಗೆ ಆಗಮಿಸಿದ ಯುವಕರ ತಂಡವೊಂದು ಅಲ್ಲಿ ನೆರದಿದ್ದವರನ್ನು ನಿಂದಿಸಲು ಪ್ರಾರಂಭಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು ಇದರ ಪರಿಣಾಮವಾಗಿ ಮೂರರಿಂದ ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ ಗಾಯಾಳುಗಳನ್ನು ಆಸ್ಪತ್ರಗೆ ದಾಖಲಿಸಿದ್ದಾರೆ. ಘಟನೆಗೆ ಕಾರಣವಾದ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿರುವ ಪೊಲೀಸರು ಉಳಿದವರಿಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + nine =
Remember me
