ಹೊಸದಿಲ್ಲಿ:ಇಂದು 2023–2024ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಸತತ 6ನೇ ಬಾರಿಗೆ ಬಜೆಟ್​ ಮಂಡಿಸುವ ಮುಖೇನ ಹೊಸ ದಾಖಲೆಯತ್ತ ಎದುರುನೋಡುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಈ ಮಧ್ಯಂತರ ಬಜೆಟ್​ನಲ್ಲಿ ಯಾರಿಗೆಲ್ಲಾ ಸಿಹಿ ಹಂಚಲಿದ್ದಾರೆ ಎಂಬ ನಿರೀಕ್ಷೆಗಳು ಸದ್ಯ ಹೆಚ್ಚಿವೆ.
ಇದನ್ನೂ ಓದಿ:ಉಸ್ತುವಾರಿ ಕಾರ್ಯದರ್ಶಿಗಳಿಗೆ ಪಾಠ; ಸಭೆ ನಡೆಸಿ ಚಳಿ ಬಿಡಿಸಿದ ಸಿದ್ದರಾಮಯ್ಯ
ಇಂದು ಬೆಳಗ್ಗೆ 11 ಗಂಟೆಗೆ ದೆಹಲಿಯ ಹೊಸ ಸಂಸತ್‌ ಭವನದಲ್ಲಿ ಮಂಡನೆಯಾಗಲಿರುವ ಮೊದಲ ಬಜೆಟ್‌ ಇದಾಗಿದ್ದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯ ಕೊನೆ ಹಂತದಲ್ಲಿ ಈ ಮಧ್ಯಂತರ ಬಜೆಟ್ ಮಂಡಿಸಲಾಗುತ್ತಿದೆ. ಈ ಬಾರಿ ಮತದಾರರಿಗೆ ಸಿಹಿ ನೀಡುವುದರ ಜತೆಗೆ ಆರ್ಥಿಕತೆಗೂ ಅನುಕೂಲವಾಗುವ ದೃಷ್ಟಿಯಿಂದ ಮಹತ್ವದ ಘೋಷಣೆಗಳನ್ನು ಪ್ರಕಟಿಸುವ ಸಾಧ್ಯತೆಗಳು ಅಧಿಕವಾಗಿದೆ.
ಈ ಮಧ್ಯಂತರ ಬಜೆಟ್​ ಮಂಡನೆಯಾದ ಬಳಿಕ ಚುನಾವಣೆ ನಡೆದು ಹೊಸ ಸರ್ಕಾರ ಅಧಿಕಾರಕ್ಕೆ ಬಂದರೆ ಮತ್ತೊಮ್ಮೆ ಬಜೆಟ್ ಮಂಡನೆಯಾಗುವ ಸಾಧ್ಯತೆಗಳೂ ಸಹ ಹೆಚ್ಚಿದ್ದು, ಈಗಾಗಲೇ ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡಿದೆ. ಈ ಬಾರಿ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಮಹಾ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲುವಿನ ಪತಾಕೆ ಹಿಡಿಯುವ ಮೂಲಕ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿಯಿದೆ.
ಇದನ್ನೂ ಓದಿ:ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ತರಲು ಹೋರಾಟ: ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ
ಇನ್ನು ಇಂದಿನ ಮಧ್ಯಂತರ ಬಜೆಟ್​ನಲ್ಲಿ ಎಲ್ಲಾ ರಾಜ್ಯ ಹಾಗೂ ಎಲ್ಲಾ ವರ್ಗದ ಜನರಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆಗಳಿದ್ದು, ಇತರ ವರ್ಷಗಳಿಗೆ ಹೋಲಿಸಿದರೆ ಈ ಬಾರಿಯ ಬಜೆಟ್​ ಅನ್ನು ಹಣಕಾಸು ಸಚಿವರು ಭಿನ್ನವಾಗಿ ಮಂಡಿಸಲಿದ್ದಾರೆ ಎಂಬ ನಿರೀಕ್ಷೆ ಹೆಚ್ಚಾಗಿಯೇ ಇದೆ,(ಏಜೆನ್ಸೀಸ್).
ಈ ರಾಶಿಯವರಿಗಿಂದು ಹಿತ ಶತ್ರುಗಳ ಕಾಟ: ನಿತ್ಯಭವಿಷ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + nine =
Remember me
