ನವದೆಹಲಿ:ಸಾರ್ವಜನಿಕ ವಲಯದ ಭಾರತೀಯ ಜೀವವಿಮಾ ನಿಗಮ (ಎಲ್‌ಐಸಿ) ಖಾಸಗೀಕರಣ ಮಾಡುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದೆ. ಇದಕ್ಕಾಗಿ ಸಂಬಂಧಿಸಿದ ಕಾನೂನಿಗೆ ತಿದ್ದುಪಡಿ ತರಲು ಸಜ್ಜಾಗಿದೆ.
ಆರಂಭದಲ್ಲಿ ಶೇ. 10 ಷೇರುಗಳನ್ನು ಮಾರಲು ನಿರ್ಧರಿಸಿದ್ದ ಕೇಂದ್ರ ಸರ್ಕಾರ, ನಂತರ ಇದನ್ನು ಶೇ. 25ಕ್ಕೆ ಏರಿಸಿದೆ. ಇದಕ್ಕೆ ಸಂಬಂಧಿಸಿದಂತೆ ಹಣಕಾಸು ಸಚಿವಾಲಯ ತಯಾರಿಸಿದ ಕರಡನ್ನು ಭಾರತೀಯ ವಿಮಾ ನಿಯಂತ್ರಣ ಪ್ರಾಧಿಕಾರ (ಐಆರ್‌ಡಿಎ), ಭಾರತೀಯ ಷೇರು ಮಾರುಕಟ್ಟೆ ಮಂಡಳಿ (ಸೆಬಿ), ಸಂಬಂಧಿಸಿದ ಇಲಾಖೆಗಳು ಮತ್ತು ನೀತಿ ಆಯೋಗಕ್ಕೆ ಸಲ್ಲಿಸಿದೆ. ಜೆಟ್ ಅಂತರ ಜಾಸ್ತಿಯಾಗುತ್ತಿದ್ದು ಅದನ್ನು ಎಲ್‌ಐಸಿಯ ಷೇರುಗಳ ಮಾರಾಟದಿಂದ ಸರಿಪಡಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.ಇದನ್ನೂ ಓದಿ:ಪಟಾಕಿ ಸಿಡಿಸೋದು ದೀಪಾವಳಿ ಹಬ್ಬದ ಅವಿಭಾಜ್ಯ ಅಂಗ: ನ್ಯಾಯಮೂರ್ತಿ ವಿ.ಪಾರ್ಥಿಬನ್ ಐತಿಹಾಸಿಕ ಆಬ್ಸರ್ವೇಶನ್​
ಎಲ್‌ಐಸಿ ಮಾತ್ರವಲ್ಲದೆ, ಭಾರತೀಯ ರೈಲ್ವೆ ಕೇಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮದ (ಐರ್‌ಸಿಟಿಸಿ) ಶೇ. 20ರಷ್ಟು ಷೇರುಗಳನ್ನು ಕೂಡ ಮುಂದಿನ ದಿನಗಳಲ್ಲಿ ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.
ಕೇಂದ್ರ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ‘‘ಸರ್ಕಾರವನ್ನು ಮಾರಾಟ ಮಾಡುವ ಕಂಪನಿ ಆಂದೋಲನ ಇದು. ದೇಶದಲ್ಲಿ ಆಗಿರುವ ಆರ್ಥಿಕ ದುರಂತವನ್ನು ಸರಿದೂಗಿಸಲು ಅದು ಹೀಗೆ ಮಾಡುತ್ತಿದೆ’’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದ ಮಾಧ್ಯಮಗಳನ್ನು ಹೊಗಳಿದ ಪ್ರಧಾನಿ ಮೋದಿ; ಪತ್ರಿಕಾ ಗೇಟ್​ ಉದ್ಘಾಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
