ನವದೆಹಲಿ:ದೇಶ ವಿರೋಧಿ ಘೋಷಣೆ ಕೂಗುವ ವಿದ್ಯಾರ್ಥಿಗಳನ್ನು ಕಂಬಿ ಹಿಂದೆ ಹಾಕಬೇಕೋ, ಬೇಡವೋ..? ಆದರೆ ಇದಕ್ಕೆ ದೆಹಲಿ ಮುಖ್ಯಮಂತ್ರಿ ಅನುಮತಿ ನೀಡುತ್ತಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಷಾ ಆರೋಪಿಸಿದ್ದಾರೆ.
ದೆಹಲಿ ಚುನಾವಣೆ ಘೋಷಣೆ ಆಗುವ ಮುಂಚೆ ಆರೋಪ ಮಾಡಿರುವ ಅಮಿತ್​ ಷಾ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ವಿರುದ್ಧ ಕಿಡಿ ಕಾರಿದರು. ಅವರು ತುಕ್ಡೆ ತುಕ್ಡೆ ಗ್ಯಾಂಗ್​ನ್ನು ಬೆಂಬಲಿಸುತ್ತಿದ್ದಾರೆ ಎಂದರು.
ತನ್ನ ರಾಜಕೀಯ ಒತ್ತಾಸೆಗಾಗಿ ಆಯುಷ್ಮಾನ್​ ಭವ ಯೋಜನೆಯನ್ನು ಜಾರಿಗೊಳಿಸದ ಕೇಜ್ರಿವಾಲ್​, ಆ ಮೂಲಕ ಬಡವರಿಗೆ ನಷ್ಟ ಉಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿದ ಷಾ, ಜನರು ಇದನ್ನು ಗಮನಿಸುತ್ತಿದ್ದಾರೆ, ಕೇಜ್ರಿವಾಲ್​ ಅವರೇ ಮುಂದಿನ ಚುನಾವಣೆಯಲ್ಲಿ ನಿಮ್ಮನ್ನು ಮನೆಗೆ ಕಳುಹಿಸಲಿದ್ದಾರೆ ಎಂದರು.
ಕಾಂಗ್ರೆಸ್​ ವಿರುದ್ಧವೂ ಕಿಡಿಕಾರಿದ ಗೃಹ ಸಚಿವ, ದೇಶದ ಅಲ್ಪ ಸಂಖ್ಯಾತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದೀರ. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಗಲಭೆಗಳಿಗೆ ನೀವೇ ಜವಾಬ್ದಾರರು ಎಂದು ಆಕ್ರೋಷ ವ್ಯಕ್ತಪಡಿಸಿದರು.
ಆಪ್​, ಕಾಂಗ್ರೆಸ್​ ಅದರಲ್ಲೂ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅಲ್ಪ ಸಂಖ್ಯಾತರನ್ನು ದಾರಿ ತಪ್ಪಿಸುತ್ತಿದ್ದಾರೆ. ಕಾಯ್ದೆ ಅನ್ವಯ ಯಾರ ಪೌರತ್ವವೂ ರದ್ದಾಗುವುದಿಲ್ಲ. ಬದಲಿಗೆ ಈ ಕಾಯ್ದೆಯಿಂದ ಪೌರತ್ವ ಸಿಗಲಿದೆ. ಈ ಪಕ್ಷಗಳೇ ದೇಶದಲ್ಲಿನ ಗಲಭೆಗಳಿಗೆ ಕಾರಣ ಎಂದು ಪುನರುಚ್ಚರಿಸಿದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − thirteen =
Remember me
