ನವದೆಹಲಿ:ಗೃಹ ಸಚಿವ ಅಮಿತ್​ ಷಾ ಅವರು ಇಂದು ರಾಷ್ಟ್ರೀಯ ಭದ್ರತಾ ವ್ಯವಸ್ಥೆ ಪರಿಶೀಲನೆಗೆ ಸಂಬಂಧಪಟ್ಟ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ಧೋವಲ್​, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್​ ಭಲ್ಲಾ, ಗುಪ್ತಚರ ಇಲಾಖೆ ನಿರ್ದೇಶಕ ಅರವಿಂದ ಕುಮಾರ್​ ಸೇರಿ ಹಲವು ಉನ್ನತ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ ಅನೇಕ ಕಡೆ ಪ್ರತಿಭಟನೆಗಳು ನಡೆಯುತ್ತಿವೆ. ಹಲವು ಕಡೆ ಹಿಂಸಾಚಾರಗಳೂ ನಡೆದಿವೆ. ಉದ್ವಿಗ್ನ ಪರಿಸ್ಥಿತಿ ನಿಯಂತ್ರಿಸಲು ತೆರಳಿದ ಪೊಲೀಸರ ಮೇಲೆ ಕೂಡ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ. ಈ ಮಧ್ಯೆ ಅಮಿತ್​ ಷಾ ನೇತೃತ್ವದಲ್ಲಿ ನಡೆದ ಸಭೆ ಮಹತ್ವ ಪಡೆದುಕೊಂಡಿದೆ.
ದೇಶದ ಭದ್ರತಾ ವ್ಯವಸ್ಥೆ ಬಗ್ಗೆ ಈ ಸಭೆಯಲ್ಲಿ ಗೃಹ ಸಚಿವರಿಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. (ಏಜೆನ್ಸೀಸ್​)
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:two × 3 =
Remember me
