ನವದೆಹಲಿ:ಲಿಬರೇಷನ್ ಆಫ್ ಟೈಗರ್ಸ್ ಆಫ್ ತಮಿಳ್ ಈಳಂ(ಎಲ್​ಟಿಟಿಇ) ಸಂಘಟನೆಯ ಮೇಲಿನ ನಿಷೇಧವನ್ನು ಮುಂದಿನ ಐದು ವರ್ಷಗಳಿಗೆ ವಿಸ್ತರಿಸಿ ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ
ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967 ರ ಸೆಕ್ಷನ್ 3 ರ ಉಪ-ವಿಭಾಗಗಳು (1) ಮತ್ತು (3) ಅನ್ನು ಅನ್ವಯಿಸಿ ಕೇಂದ್ರ ಗೃಹ ಸಚಿವಾಲಯವು ನಿಷೇಧಿತ ಲಿಬರೇಷನ್ ಆಫ್ ಟೈಗರ್ಸ್ ಆಫ್ ತಮಿಳ್ ಈಳಂ – ಎಲ್ ಟಿಟಿಇ ಯನ್ನು ಕಾನೂನು ಬಾಹಿರ ಸಂಘಟನೆ ಎಂದು ನಿಷೇಧಿಸಿದೆ.
ಕೇಂದ್ರ ಸರ್ಕಾರ ಈ ಮೊದಲೇ ಎಲ್ ಟಿಟಿಇ ಮೇಲೆ ನಿಷೇಧ ವಿಧಿಸಿತ್ತು. ಈ ನಿಷೇಧ ಇಂದಿನಿಂದ ಮುಂದಿನ 5 ವರ್ಷಗಳವರೆಗೆ ಅದನ್ನು ವಿಸ್ತರಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಎಲ್​ಟಿಟಿಇ ಶ್ರೀಲಂಕಾ ಮೂಲದ್ದೇ ಆದರೂ ಅದರ ಬೆಂಬಲಿಗರು ಮತ್ತು ಏಜೆಂಟರು ಭಾರತದ ನೆಲದೊಳಗೆ ಇದ್ದಾರೆ. ಇವರ ಕಾರ್ಯಾಚರಣೆ ಈಗೂಲು ದೇಶದೊಳಗೆ ನಡೆಯುತ್ತಿರುವ ಸಾಧ್ಯತೆಇದೆ. ಇದು ಭಾರತದ ಸಮಗ್ರತೆ ಭದ್ರತೆಗೆ ಧಕ್ಕೆಯುಂಟು ಮಾಡುವ ಅಪಾಯವಿದ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.
ಮಾಜಿ ಪ್ರಧಾನಿ ರಾಜೀವ ಗಾಂಧಿ ಅವರನ್ನು 1991ರಲ್ಲಿ ಎಲ್​ಟಿಟಿಇ ಸಂಘಟನೆ ಮಾನವಬಾಂಬ್​ ಸ್ಫೋಟಿಸಿ ಹತ್ಯೆಗೈದಿತ್ತು. 2009ರಲ್ಲಿ ಎಲ್​ಟಿಟಿಇ ಮುಖ್ಯಸ್ಥ ವೆಲುಪಿಲೈ ಪ್ರಭಾಕರನ್​ ಅವರನ್ನು ಕೊಂದು ಹಾಕಿತ್ತು. ಎಲ್ ಟಿಟಿಇ ಕಾನೂನು ಬಾಹಿರ ಸಂಘಟನೆಯಾಗಿರುವ ಕಾರಣ, ಸಾಧ್ಯವಾದ ಎಲ್ಲ ರೀತಿಯಲ್ಲೂ ಸಂಘಟನೆಯ ಪ್ರತ್ಯೇಕತವಾದಿ ಚಟುವಟಿಕೆಗಳನ್ನು ಎಲ್ಲ ರೀತಿಯಲ್ಲೂ ನಿಯಂತ್ರಿಸುವ ಅಗತ್ಯವಿದೆ ಎಂದು ಗೃಹ ಸಚಿವಾಲಯ ಹೇಳಿದೆ.
ಅಬಕಾರಿ ನೀತಿ ಪ್ರಕರಣ: ಕೆ.ಕವಿತಾಗೆ ಮತ್ತೆ ಹಿನ್ನಡೆ, ಮೇ 20 ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − five =
Remember me
