ಬೆಂಗಳೂರು:ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಕಟ್ಟಡವನ್ನು(3D-Printed Post Office Building) ಇಂದು ಕೇಂದ್ರ ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್‌ ಉದ್ಘಾಟಿಸಿದರು.
ಬೆಂಗಳೂರಿನ ಕೆಂಬ್ರಿಡ್ಜ್‌ ಲೇಔಟ್‌ನಲ್ಲಿ ನಿರ್ಮಾಣವಾಗಿರುವ 3ಡಿ ಮುದ್ರಿತ ‌ಅಂಚೆ ಕಚೇರಿಯನ್ನು ಉದ್ಘಾಟಿಸಿ ವಿಶೇಷ ಅಂಚೆ ಲಕೋಟೆ ಮತ್ತು ಅಂಚೆ ಕಚೇರಿಯ ಮಾದರಿ​ ಬಿಡುಗಡೆ ಮಾಡಿದರು.
ಇದನ್ನೂ ಓದಿ:IRCTC ವೆಬ್‌ಸೈಟ್ ಹ್ಯಾಕ್ ಮಾಡಿ ನಕಲಿ ತತ್ಕಾಲ್ ಟಿಕೆಟ್‌ಗಳಿಂದ 30 ಲಕ್ಷ ಗಳಿಸಿದ ಖದೀಮ..!
ಬೆಂಗಳೂರಿನಲ್ಲಿ ಸಕಾರಾತ್ಮಕ ಚಿಂತನೆ ಅಧಿಕವಾಗಿದ್ದು, ಭಾರತಕ್ಕೆ ಹೊಸ ಚಿತ್ರಣವನ್ನು ನೀಡುತ್ತಾ ಬಂದಿದೆ. ಇದು ದೇಶದ ಅಭಿವೃದ್ಧಿಗೆ ಸಾಕಷ್ಟು ಸಹಕಾರಿಯಾಗಿದೆ. ಜನರ ಸಾಮರ್ಥ್ಯಗಳಲ್ಲಿ ವಿಶ್ವಾಸವನ್ನು ಹೊಂದಿರುವ ನಾಯಕತ್ವವನ್ನು ದೇಶದಲ್ಲಿ ಇರುವುದರಿಂದ ಅಭಿವೃದ್ಧಿಶೀಲ ಬದಲಾವಣೆ ಸಾಧ್ಯವಾಗಿದೆ. ಇಂದು ಲೋಕಾರ್ಪಣೆಗೊಂಡಿರುವ 3ಡಿ- ಮುದ್ರಿತ ಅಂಚೆ ಕಚೇರಿಯ ದೇಶ ಪ್ರಗತಿಯತ್ತ ಸಾಗುತ್ತಿದೆ ಎಂಬುದಕ್ಕೆ ತಾಜಾ ಉದಾಹರಣೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಹೇಳಿದರು.
ಸುಮಾರು 1000 ಚದರ ಅಡಿ ವಿಸ್ತೀರ್ಣದಲ್ಲಿ 3D ಕಾಂಕ್ರೀಟ್ ಪ್ರಿಂಟಿಂಗ್ ತಂತ್ರಜ್ಞಾನವನ್ನು ಬಳಸಿಕೊಂಡು 3ಡಿ ಮುದ್ರಿತ ‌ಅಂಚೆ ಕಚೇರಿ ಅಂಚೆ ಕಚೇರಿ ಕಟ್ಟಡವನ್ನು ನಿರ್ಮಿಸಲಾಗಿದೆ. ರಚನಾತ್ಮಕ ವಿನ್ಯಾಸವನ್ನು ಐಐಟಿ ಮದ್ರಾಸ್ ಅನುಮೋದಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + seven =
Remember me
