ನವದೆಹಲಿ:ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ಕರೊನಾ ಸೋಂಕಿಗೆ ಒಳಗಾಗಿ ಗುರ್​ಗಾಂವ್ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ, ಇನ್ನೋರ್ವ ಕೇಂದ್ರ ಸಚಿವರಲ್ಲಿ ಕರೊನಾ ದೃಢಪಟ್ಟಿದೆ.
ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಉಕ್ಕಿನ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್​ ಅವರಲ್ಲಿ ಕರೊನಾ ದೃಢಪಟ್ಟಿದ್ದು, ಅವರೂ ಕೂಡ ಅಮಿತ್​ ಷಾ ಅವರು ಚಿಕಿತ್ಸೆ ಪಡೆಯುತ್ತಿರುವ ಮೇದಾಂತಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಧರ್ಮೇಂದ್ರ ಪ್ರಧಾನ್ ಅವರು ಜು.29ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ. ಅಮಿತ್​ ಷಾ ಅವರ ಪ್ರಾಥಮಿಕ ಸಂಪರ್ಕವೂ ಇರಲಿಲ್ಲ. ಬದಲಿಗೆ ಅವರ ಕಚೇರಿ ಸಿಬ್ಬಂದಿಯಲ್ಲಿ ಕರೊನಾ ಕಾಣಿಸಿಕೊಂಡಿತ್ತು. ಹಾಗಾಗಿ ಧರ್ಮೇಂದ್ರ ಪ್ರಧಾನ್​ ಅವರು ಸೆಲ್ಫ್​ ಐಸೋಲೇಟ್​ ಆಗಿದ್ದರು.ಇದನ್ನೂ ಓದಿ:24ಗಂಟೆಯಲ್ಲಿ ಪತ್ತೆಯಾದ ಹೊಸ ಕರೊನಾ ಪ್ರಕರಣಗಳಿಗಿಂತ ಡಿಸ್​​ಚಾರ್ಜ್​ ಆದವರೇ ಹೆಚ್ಚು; 110 ಮಂದಿ ಸಾವು
ದೇಶದಲ್ಲಿ ಹಲವು ಪ್ರಮುಖ ರಾಜಕೀಯ ಮುಖಂಡರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ. ಮಧ್ಯಪ್ರದೇಶ, ಕರ್ನಾಟಕ ಮುಖ್ಯಮಂತ್ರಿಗಳು, ತಮಿಳುನಾಡು ರಾಜ್ಯಪಾಲರು ಕರೊನಾಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. (ಏಜೆನ್ಸೀಸ್​)
ಸುಶಾಂತ್​ ಮಾಜಿ ಮ್ಯಾನೇಜರ್​ ದಿಶಾಳನ್ನು ರೇಪ್​ ಮಾಡಿ ಸಾಯಿಸಲಾಗಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 19 =
Remember me
