ನವದೆಹಲಿ:ಇತ್ತೀಚೆಗಷ್ಟೇ ಜೀವ ಬೆದರಿಕೆಗೆ ಒಳಗಾಗಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಇದೀಗ ಇನ್ನೊಮ್ಮೆ ಜೀವ ಬೆದರಿಕೆ ಬಂದಿದೆ. ಈ ಮೂಲಕ ನಾಲ್ಕೇ ತಿಂಗಳಲ್ಲಿ 2 ಸಲ ಜೀವ ಬೆದರಿಕೆ ಬಂದಂತಾಗಿದೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ದೆಹಲಿ ನಿವಾಸಕ್ಕೆ ಸೋಮವಾರ ಸಂಜೆ ಕರೆಯೊಂದು ಬಂದಿದ್ದು, ಆ ಕಡೆಯಿಂದ ಮಾತನಾಡಿದ್ದ ವ್ಯಕ್ತಿ ಜೀವ ಬೆದರಿಕೆ ಒಡ್ಡಿದ್ದ. ಸಚಿವರ ಕಚೇರಿ ಸಿಬ್ಬಂದಿ ಕೂಡಲೇ ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣದ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ಗಡ್ಕರಿಗೆ ಬೆದರಿಕೆ!? ಬೆಳಗಾವಿಯಲ್ಲಿ ನಾಗ್ಪುರ ಪೊಲೀಸರ ಕಾರ್ಯಾಚರಣೆ
ಈ ಹಿಂದೆ ಇದೇ ವರ್ಷದ ಜನವರಿಯಲ್ಲಿ ಕೇಂದ್ರ ಸಚಿವರನ್ನುದ್ದೇಶಿಸಿ ಜೀವ ಬೆದರಿಕೆ ಕರೆಗಳು ಬಂದಿದ್ದವು. ಅದರಲ್ಲೂ ಬೆಳಗಾವಿಯ ಹಿಂಡಲಗಾ ಸೆಂಟ್ರಲ್ ಜೈಲಿನ ಕೈದಿಯಿಂದಲೇ ಈ ಜೀವ ಬೆದರಿಕೆ ಕರೆ ಹೋಗಿತ್ತು. ಈ ಸಂಬಂಧ ಶಂಕಿತ ಆರೋಪಿಯನ್ನು ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಎಂಬಾತನನ್ನು ವಶಕ್ಕೆ ಪಡೆಯಲಾಗಿತ್ತು.
ಸೊಳ್ಳೆ ಕಡಿತದಿಂದ ಪುತ್ರನ ಸಾವು, ವಿಮೆ ಹಣಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ ತಾಯಿ: ಆಮೇಲೇನಾಯ್ತು?

ವಾಟ್ಸ್ಆ್ಯಪ್ ಮೂಲಕ ವಂಚನೆ; ಸುರಕ್ಷತೆಗಾಗಿ ನೀವು ಮಾಡಬೇಕಾದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
