ಬೆಂಗಳೂರು:ಅಯೋಧ್ಯೆ ರಾಮಮಂದಿರ ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ದಿನಗಣನೆ ಆರಂಭಗೊಂಡಿದ್ದು, ಇಡೀ ರಾಜ್ಯದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಈಗಾಗಲೇ ಸಮಾರಂಭಕ್ಕೆ ಅಗತ್ಯವಿರುವ ಎಲ್ಲಾ ತಯಾರಿಗಳನ್ನು ಉತ್ತರಪ್ರದೇಶ ಸರ್ಕಾರ ಮಾಡಿಕೊಂಡಿದ್ದು, ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ಕೆ ವಿಗ್ರಹ ಆಯ್ಕೆ ಪ್ರಕ್ರಿಯೆ ಕೂಡ ಅಂತಿಮಗೊಳಿಸಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಸಹ ಲಭಿಸಿದೆ.
ಇದನ್ನೂ ಓದಿ:Gold, Silver Price; ಮತ್ತೆ ಏರಿಕೆ ಕಂಡ ಚಿನ್ನದ ದರ! ಚಿನ್ನ, ಬೆಳ್ಳಿ ದರ ಪಟ್ಟಿ ಇಲ್ಲಿದೆ…
ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮನ ವಿಗ್ರಹ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳಲು ಆಯ್ಕೆಯಾಗಿರುವ ಸಂಗತಿ ಇದೀಗ ರಾಜ್ಯಕ್ಕೆ ಹೆಮ್ಮೆ ತಂದಿದ್ದು, ಈ ಕುರಿತಂತೆ ಬಿಜೆಪಿ ನಾಯಕರು ಭಾರೀ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಮಹಾಭಿಷೇಕ ಸಮಾರಂಭಕ್ಕೂ ಮುನ್ನ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟ್ವೀಟ್​ ಮಾಡಿ, ಅರುಣ್ ಅವರಿಗೆ ಶ್ಲಾಘಿಸಿದ್ದಾರೆ.
ಅರುಣ್ ರಾಮನ ಪ್ರತಿಮೆಯ ಫೋಟೋ ಜತೆಯಿರುವ ಫೋಟೋವೊಂದನ್ನು ಹಾಕಿರುವ ಸಚಿವರು,”ಎಲ್ಲಿ ರಾಮನೋ ಅಲ್ಲಿ ಹನುಮನು..ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ಕೆ ವಿಗ್ರಹ ಆಯ್ಕೆ ಅಂತಿಮಗೊಂಡಿದೆ. ನಮ್ಮ ನಾಡಿನ ಹೆಸರಾಂತ ಶಿಲ್ಪಿ ನಮ್ಮ ಹೆಮ್ಮೆಯ ಅರುಣ್ ಯೋಗಿರಾಜ್ ಕೆತ್ತಿರುವ ಶ್ರೀರಾಮನ ವಿಗ್ರಹ ಪುಣ್ಯಭೂಮಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ. ರಾಮ ಹನುಮರ ಅವಿನಾಭಾವ ಸಂಬಂಧಕ್ಕೆ ಇದು ಮತ್ತೊಂದು ನಿದರ್ಶನ. ಹನುಮನ ನಾಡು ಕರ್ನಾಟಕದಿಂದ ರಾಮಲಲ್ಲಾನಿಗೆ ಇದೊಂದು ಮಹತ್ವಪೂರ್ಣ ಸೇವೆ ಎಂದರೆ ತಪ್ಪಾಗಲಾರದು ಎಂದು ಬರೆದು ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:ಬಿಗಿಯಾಯ್ತು ಪುರಿ ಜಗನ್ನಾಥ ದೇವಾಲಯದ ರೂಲ್ಸ್​! ಈ ರೀತಿಯ ಬಟ್ಟೆಗಳನ್ನು ಧರಿಸಿದರೆ ಪ್ರವೇಶವಿಲ್ಲ
ಇನ್ನು ಈ ಬಗ್ಗೆ ಮಾತನಾಡಿದ ಯೋಗಿರಾಜ್ ಅವರ ತಾಯಿ, “ಇದು ನಮಗೆ ಅತ್ಯಂತ ಸಂತೋಷದ ಕ್ಷಣ. ನಾನು ಅವನ ಕೆತ್ತನೆ ಮತ್ತು ರಾಮ್ ಲಲ್ಲಾಗೆ ಆಕಾರ ನೀಡುವುದನ್ನು ನೋಡಲು ಬಯಸಿದ್ದೆ, ಆದರೆ ಕೊನೆಯ ದಿನ ವಿಗ್ರಹದ ದರ್ಶನಕ್ಕೆ ನನ್ನನ್ನು ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದರು. ರಾಮಮಂದಿರದಲ್ಲಿ ಭವ್ಯವಾದ ಪ್ರತಿಷ್ಠಾಪನೆಯ ದಿನದಂದೇ ವಿಗ್ರಹವನ್ನು ನನ್ನ ಕಣ್ಣುಗಳಿಂದ ನೇರವಾಗಿ ನೋಡಲು ಬಯಸುತ್ತೇನೆ” ಎಂದು ಹೇಳಿದ್ದಾರೆ.
ಜನವರಿ 22ರಂದು ಮಧ್ಯಾಹ್ನ 12:20ಕ್ಕೆ ಅಯೋಧ್ಯೆ ರಾಮಮಂದಿರದ ಪಟ್ಟಾಭಿಷೇಕ ಸಮಾರಂಭ ನಡೆಯಲಿದೆ,(ಏಜೆನ್ಸೀಸ್).
"ಎಲ್ಲಿ ರಾಮನೋ ಅಲ್ಲಿ ಹನುಮನು"
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ಕೆ ವಿಗ್ರಹ ಆಯ್ಕೆ ಅಂತಿಮಗೊಂಡಿದೆ. ನಮ್ಮ ನಾಡಿನ ಹೆಸರಾಂತ ಶಿಲ್ಪಿ ನಮ್ಮ ಹೆಮ್ಮೆಯ ಶ್ರೀ@yogiraj_arunಅವರು ಕೆತ್ತಿರುವ ಶ್ರೀರಾಮನ ವಿಗ್ರಹ ಪುಣ್ಯಭೂಮಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ. ರಾಮ ಹನುಮರ ಅವಿನಾಭಾವ ಸಂಬಂಧಕ್ಕೆ ಇದು…pic.twitter.com/VQdxAbQw3Q
— Pralhad Joshi (@JoshiPralhad)January 1, 2024

ಬಿಗಿಯಾಯ್ತು ಪುರಿ ಜಗನ್ನಾಥ ದೇವಾಲಯದ ರೂಲ್ಸ್​! ಈ ರೀತಿಯ ಬಟ್ಟೆಗಳನ್ನು ಧರಿಸಿದರೆ ಪ್ರವೇಶವಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
