ಚೆನ್ನೈ: ತಮಿಳುನಾಡಿನಲ್ಲಿ ಚುನಾವಣಾ ಕಣ ರಂಗೇರಿದೆ. ಎಲ್ಲ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ಬಿಜೆಪಿ ಪರ ಪ್ರಚಾರಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ರಾಜ್ಯಕ್ಕೆ ಬಂದಿದ್ದು, ರಾಜ್ಯದ ಪ್ರಸಿದ್ಧ ದಾಂಡಿಯಾ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಆ ವಿಡಿಯೋ ಇದೀಗ ವೈರಲ್​ ಆಗಿದೆ.
ಕೊಯಮತ್ತೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವನತಿ ಶ್ರೀನಿವಾಸನ್ ಪರ ಪ್ರಚಾರದಲ್ಲಿ ಶನಿವಾರದಂದು ಸ್ಮೃತಿ ಇರಾನಿ ಅವರು ಭಾಗವಹಿಸಿದ್ದರು. ಈ ವೇಳೆ ಪಕ್ಷದ ಒಂದಿಷ್ಟು ಕಾರ್ಯಕರ್ತರು ದಾಂಡಿಯಾ ನೃತ್ಯ ಮಾಡಲು ಆರಂಭಿಸಿದ್ದಾರೆ. ಅವರೊಂದಿಗೆ ಹೆಜ್ಜೆ ಹಾಕಿದ ಸಚಿವೆ ದಾಂಡಿಯಾ ನೃತ್ಯ ಮಾಡಿದ್ದಾರೆ.
ತಮಿಳುನಾಡಿನಲ್ಲಿ ಏಪ್ರಿಲ್ 6ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ. ರಾಜ್ಯದ 234 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಕಾಂಗ್ರೆಸ್-ಡಿಎಂಕೆ ಮತ್ತು ಬಿಜೆಪಿ-ಎಐಎಡಿಎಂಕೆ ಮೈತ್ರಿ ಪರಸ್ಪರರ ವಿರುದ್ಧ ಸ್ಪರ್ಧಿಸುವ ಪ್ರಮುಖ ಗುಂಪುಗಳಾಗಿವೆ. (ಏಜೆನ್ಸೀಸ್​)
ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಸ್ತ್​ ದಾಂಡಿಯಾ..!ತಮಿಳುನಾಡಿನ ಕೊಯಮತ್ತೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವನತಿ ಶ್ರೀನಿವಾಸನ್ ಪರ ಪ್ರಚಾರ ನಡೆಸುತ್ತಿರುವಾಗ ಕೇಂದ್ರ ಸಚಿವೆ ಸ್ಮೃತಿ ಇರಾನಿ ದಾಂಡಿಯಾ ನೃತ್ಯ ಮಾಡಿರುವ ದೃಶ್ಯವಿದು… ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಕತ್​ ವೈರಲ್​ ಆಗಿದೆ.ಜ್ಞ@smritiirani@BJP4Indiapic.twitter.com/S5LUDdu0KG
— Vijayavani (@VVani4U)March 28, 2021

ಶತಮಾನಗಳ ಕಾಲ ಕಾಡುವ ಪರ್ವ: ಈಗ ರಂಗಪ್ರಯೋಗದ ಸದ್ದು; ಮತ್ಸರಕ್ಕೆಲ್ಲಿದೆ ಮದ್ದು?

ಹೋಳಿ ಹಬ್ಬದ ವೈವಿಧ್ಯ; ಇಂದು ಬಣ್ಣದ ಹಬ್ಬ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − eight =
Remember me
