ಕಲ್ಕತ್ತಾ:ಜಿಲ್ಲಾ ಮಟ್ಟದ ನಾಯಕರು ಕಾರ್ಯಕರ್ತರ ಮೇಲೆ ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಕೇಂದ್ರ ಸಚಿವರನ್ನು ಕೆಲಹೊತ್ತು ಕೂಡಿ ಹಾಕಿರುವ ಘಟನೆ ಪಶ್ಚಿಮ ಬಂಗಾಳದ ಬಂಕುರಾದಲ್ಲಿ ನಡೆದಿದೆ.
ಬಂಕುರಾ ಲೋಕಸಭೆ ಕ್ಷೇತ್ರದ ಸಂಸದ, ಕೇಂದ್ರ ಸಚಿವ ಸುಭಾಷ್​ ಸರ್ಕಾರ್​ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಮಧ್ಯಾಹ್ನ ಸಭೆ ನಡೆಸುತ್ತಿದ್ದರು. ಈ ವೇಳೆ ಪಕ್ಷದ ನಾಯಕರ ವಿರುದ್ಧ ಘೊಷಣೆಗಳನ್ನು ಕೂಗುತ್ತಾ ಬಮದ ಕಾರ್ಯಕರ್ತರು ಕೇಂದ್ರ ಸಚಿವರು ಸೇರಿದಂತೆ ಅನೇಕರನ್ನು ಕಚೇರಿಯೊಳಗೆ ಕೂಡಿ ಹಾಕಿ ಆಕ್ರೋಶ ಹೊರಹಾಕಿದ್ದಾರೆ.
ಈ ಕುರಿತು ಮಾತನಾಡಿದ ಕಾರ್ಯಕರ್ತ ಮೋಹಿತ್​ ಕೇಂದ್ರ ಸಚಿವ ಸರ್ಕಾರ್​ ಕಾರ್ಯಕರ್ತರಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಿಲ್ಲ. ತಮ್ಮ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವವರಿಗೆ ಜಿಲ್ಲಾ ಘಟಕದಲ್ಲಿ ಸ್ಥಾನಮಾನ ನೀಡಲಾಗುತ್ತಿದೆ. ನಾವು ಪಕ್ಷವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಇಂದು ಪ್ರತಿಭಟನೆ ಮಾಡುತ್ತಿದ್ದೇವೆ.
ಕಳೆದ ನಪುರಸಭೆ ಚುನಾವಣೆಯಲ್ಲಿ ಬಂಕುರಾದಲ್ಲಿ ನಾವು ಎರಡು ಸ್ಥಾನ ಗೆದ್ದಿದ್ದೆವು. ಆದರೆ, ಈ ಬಾರಿ ಸಂಸದರ ಅದಕ್ಷೆತಯಿಂದಾಗಿ ನಾವು ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಹಲವು ಪಂಚಾಯಿತಿ ಚುನಾವನೆಯಲ್ಲೂ ನಾವು ನಿರೀಕ್ಷತಿ ಮಟ್ಟದಲ್ಲಿ ಸಾಧನೆ ಮಾಡಿಲ್ಲ. ಇದು ಅವಮಾನಕರ ಸಂಗತಿಯಾಗಿದೆ. ಇದನ್ನು ಪ್ರಶ್ನಿಸಿದವರಿಗೆ ವಿವರಣೆ ನೀಡುವಂತೆ ಶೋಕಾಸ್​ ನೋಟಿಸ್​ ನೀಡಲಾಗಿದೆ ಎಂದು ಕಾರ್ಯಕರ್ತ ಮೋಹಿತ್​ ಆರೋಪಿಸಿದ್ದಾರೆ.
With each passing day,@BJP4Bengalis crumbling as infighting is reaching its peak!In Bankura, vehement clashes erupted, & BJP workers locked Union Minister Subhas Sarkar in the party office.While unity within the party is a myth, BJP is truly a shining example of a weak…pic.twitter.com/Tu90BpQSZ7
ಇದನ್ನೂ ಓದಿ:ಚಂದ್ರಬಾಬು ನಾಯ್ಡು ಅರೆಸ್ಟ್; ಗೃಹಬಂಧನಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ನ್ಯಾಯಾಲಯ
ಘಟನೆಯ ಮಾಹಿತಿ ಪಡೆದ ಸಚಿವರ ಬೆಂಬಲಿಗರು ಹಾಗೂ ಪ್ರತಿಭಟನಾ ನಿರತರ ನಡುವೆ ಮಾತಿನ ಚಕಮಕಿಯಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ ಕೇಂದ್ರ ಸಚಿವ ಸುಭಾಷ್​ ಸರ್ಕಾರ್​ರನ್ನು ಸುರಕ್ಷಿತವಾಗಿ ಹೊರಕ್ಕೆ ತಂದಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿದ ರಾಜ್ಯ ಘಟಕದ ಅಧ್ಯಕ್ಷ ಸಮೀಕ್​ ಭಟ್ಟಾಚಾರ್ಯ ಇದೂಂದು ದುರದೃಷ್ಟಕರ ಘಟನೆಯಾಗಿದ್ದು, ಈ ರೀತಿ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಒಂದು ವೇಳೆ ಸಮಸ್ಯೆಗಳಿದ್ದರೆ ಅದನ್ನು ಸರಿಯಾದ ರೀತಿಯಲ್ಲಿ ಬಗೆಹರಿಸಿಕೊಳ್ಳಬೇಕು. ಪಕ್ಷ ಸಂಘಟನೆಗೂ ಸರ್ಕಾರ್​ ಅವರಿಗೂ ಯಾವುದೇ ಸಂಬಂಧವಿಲ್ಲ. ಕೆಲವರ ತಪ್ಪು ಗ್ರಹಿಕೆ ಅಥವಾ ಪ್ರಚೋದನೆಯಿಂದಾಗಿ ಅವರ ಮೇಲೆ ಆರೋಪ ಮಾಡಲಾಗಿದೆ. ಘಟನೆಯಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಹಂಚಿಕೊಂಡಿರುವ ತೃಣಮೂಲ ಕಾಂಗ್ರೆಸ್​ ಬಿಜೆಪಿಯನ್ನು ಟೀಕಿಸಿದೆ. ದುರ್ಬಲ ಅಡಿಪಾಯ ಹಾಗೂ ಕೆಲವರಿಗಷ್ಟೇ ಮನ್ನಣೆ ನೀಡಿದರೆ ಈಗೆ ಆಗುವುದು ಎಂದು ವ್ಯಂಗ್ಯವಾಡಿದೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:6 + two =
Remember me
