ನವದೆಹಲಿ:ರಾಷ್ಟ್ರಾದ್ಯಂತ ಏ.14ರವರೆಗೆ ಜಾರಿಗೊಳಿಸಲಾಗಿರುವ ಮೊದಲ ಹಂತದ ಲಾಕ್​ಡೌನ್​ ಮುಗಿಯಲು ಕೆಲವೇ ಗಂಟೆಗಳು ಬಾಕಿ ಇವೆ. ಅದಾಗಲೇ ಏಪ್ರಿಲ್​ 30ರವರೆಗೆ ಎರಡನೇ ಹಂತದ ಲಾಕ್​ಡೌನ್​ ವಿಸ್ತರಣೆಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಆದರೆ, ಎರಡನೇ ಹಂತದಲ್ಲಿ ಒಂದಷ್ಟು ವಿನಾಯ್ತಿಗಳನ್ನು ನೀಡಿ, ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡುವ ಲಕ್ಷಣಗಳು ಕಂಡುಬರುತ್ತಿವೆ.
ಹೀಗಿರುವಂತೆ ಕೇಂದ್ರ ಸಚಿವರು ಮತ್ತು ಅಧಿಕಾರಿಗಳು ಸೋಮವಾರ ತಮ್ಮ ಕಚೇರಿಗಳಿಗೆ ಬಂದು, ಅಲ್ಲಿಂದಲೇ ಕಾರ್ಯನಿರ್ವಹಿಸಲು ಆರಂಭಿಸಿದ್ದಾರೆ. ಇದರಿಂದಾಗಿ, 2ನೇ ಹಂತದ ಲಾಕ್​ಡೌನ್​ನಲ್ಲಿ ಕೆಲವೊಂದು ವಿನಾಯ್ತಿಗಳನ್ನು ನೀಡುವ ಸಾಧ್ಯತೆ ದಟ್ಟವಾಗಿದೆ.
ಕೇಂದ್ರ ಕ್ರೀಡಾ ಸಚಿವ ಕಿರಣ್​ ರಿಜ್ಜಿಜು ಸೋಮವಾರ ಭಾರತೀಯ ಕ್ರೀಡಾ ಪ್ರಾಧಿಕಾರದ (ಎಸ್​ಎಐ) ಕೇಂದ್ರ ಕಚೇರಿಗೆ ಸೋಮವಾರ ಭೇಟಿ ನೀಡಿದ್ದರು. ಮಾಸ್ಕ್​ ಧರಿಸಿದ್ದ ಅವರು, ಸಾಯ್​ ಕೇಂದ್ರವನ್ನು ಪ್ರವೇಶಿಸುವ ಮುನ್ನ ಸ್ಯಾನಿಟೈಸರ್​ನಲ್ಲಿ ಕೈಗಳನ್ನು ಸ್ವಚ್ಛಗೊಳಿಸಿಕೊಂಡರು.ಕನಿಷ್ಠ ಸಿಬ್ಬಂದಿಯೊಂದಿಗೆ ಕ್ರೀಡಾ ಇಲಾಖೆ ಕಾರ್ಯನಿರ್ವಹಣೆ ಆರಂಭಿಸಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್​ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸುತ್ತಿದ್ದೇವೆ. ಜತೆಗೆ ದೇಹದ ತಾಪಮಾನ ಪರೀಕ್ಷೆಯನ್ನೂ ಕಡ್ಡಾಯಗೊಳಿಸಲಾಗಿದೆ ಎಂದು ರಿಜ್ಜಿಜು ಸುದ್ದಿಗಾರರಿಗೆ ತಿಳಿಸಿದರು.
ಜಂಟಿ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳು ಮತ್ತು ಮೂರನೇ ಒಂದು ಭಾಗದಷ್ಟು ಅಗತ್ಯ ಸಿಬ್ಬಂದಿಯೊಂದಿಗೆ ಸೋಮವಾರದಿಂದ ಕಚೇರಿಗಳಿಂದಲೇ ಕಾರ್ಯನಿರ್ವಹಿಸುವಂತೆ ಕೇಂದ್ರ ಸರ್ಕಾರ ತನ್ನೆಲ್ಲ ಸಚಿವರಿಗೆ ಸೂಚಿಸಿತ್ತು.
ಲಾಕ್​ಡೌನ್​ ನಡುವೆಯೂ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, 10 ಗ್ರಾಂಗೆ 45,600 ರೂ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
