ಲಖನೌ:ಬಾಂಗ್ಲಾದೇಶದಲ್ಲಿ ಹಿಂದು ದೇವಾಲಯವನ್ನು ಮಂಗಳವಾರ(ಆಗಸ್ಟ್​​​6) ಧ್ವಂಸಗೊಳಿಸಿದ ದಾಳಿಕೋರರು ಬೆಲೆಬಾಳುವ ವಸ್ತುಗಳನ್ನು ಮತ್ತು ಪಡಿತರವನ್ನು ಲೂಟಿ ಮಾಡಿದ್ದಾರೆ. ಆದರೆ ಮತ್ತೊಂದು ಹಿಂದು ದೇವಾಲಯದ ಮೇಲಿನ ದಾಳಿಯ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಕೋಲ್ಕತಾ ಇಸ್ಕಾನ್ ದೇವಾಲಯದ ಉಪಾಧ್ಯಕ್ಷ ರಾಧಾರಾಮನ್ ದಾಸ್ ಬುಧವಾರ (ಆಗಸ್ಟ್​​ 7) ಹೇಳಿದರು.
ಇದನ್ನು ಓದಿ:ವಯನಾಡು ಭೂಕುಸಿತವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ; ರಾಹುಲ್​ಗಾಂಧಿ
ದೇವಸ್ಥಾನವನ್ನು ಧ್ವಂಸಗೊಳಿಸಲು ಗುಂಪೊಂದು ಜಮಾಯಿಸಿತ್ತು. ಅದು ಹಿಂದು ಪ್ರಾಬಲ್ಯದ ಪ್ರದೇಶವಾಗಿದ್ದರಿಂದ ಅವರ ಪ್ರಯತ್ನವು ಸಾಕಾರವಾಗಲಿಲ್ಲ. ಇಂದು ಯಾವುದೇ ದಾಳಿ ನಡೆದಿಲ್ಲ ಎಂದು ಅವರು ತಿಳಿಸಿದರು. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​​, ಬಾಂಗ್ಲಾದೇಶದಲ್ಲಿ ಹಿಂದುಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗುತ್ತಿದೆ. ಸನಾತನ ಧರ್ಮಕ್ಕಿರುವ ಬೆದರಿಕೆಯ ವಿರುದ್ಧ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಕರೆ ನೀಡಿದ್ದಾರೆ.
ಇತಿಹಾಸದ ತಪ್ಪುಗಳಿಂದ ಪಾಠ ಕಲಿಯದ ಸಮಾಜದ ಉಜ್ವಲ ಭವಿಷ್ಯಕ್ಕೆ ಗ್ರಹಣ ಹಿಡಿದಿದೆ ಎಂಬುದನ್ನು ನೆನಪಿಟ್ಟುಕೊಳ್ಳಬೇಕು. ಸನಾತನ ಧರ್ಮಕ್ಕೆ ಆಗುತ್ತಿರುವ ಅಪಾಯವನ್ನು ಎದುರಿಸಲು ಮತ್ತೊಮ್ಮೆ ಒಗ್ಗಟ್ಟಿನಿಂದ ಶ್ರಮಿಸುವ ಅಗತ್ಯವಿದೆ. ಇದಕ್ಕಾಗಿ ಒಗ್ಗಟ್ಟಿನಿಂದ ಹೋರಾಡುವ ಅಗತ್ಯವಿದೆ ಎಂದು ಯೋಗಿ ಆದಿತ್ಯನಾಥ್​​ ತಿಳಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಸರ್ಕಾರಿ ಉದ್ಯೋಗದಲ್ಲಿನ ಮೀಸಲಾತಿ ವಿಚಾರವಾಗಿ ವಿದ್ಯಾರ್ಥಿಗಳಿಂದ ಆರಂಭವಾದ ಪ್ರತಿಭಟನೆಯು ಹಿಂಸಾತ್ಮಕ ರೂಪವನ್ನು ಪಡೆದುಕೊಂಡಿತು. ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು ಬಾಂಗ್ಲಾದಿಂದ ಪಲಾಯನ ಮಾಡಿ ಭಾರತಕ್ಕೆ ಬಂದಿದ್ದಾರೆ.ನೆರೆದ ದೇಶದ ಪರಿಸ್ಥಿತಿ ಇನ್ನೂ ಗಂಭೀರವಾಗಿದೆ. (ಏಜೆನ್ಸೀಸ್​)
ಎಲಾನ್​ ಮಸ್ಕ್​​ ಜತೆಗಿನ ಸಂದರ್ಶನದ ಮಾಹಿತಿ ಹಂಚಿಕೊಂಡ ಡೊನಾಲ್ಡ್​​ ಟ್ರಂಪ್​​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − six =
Remember me
