ದೇಶದಲ್ಲಿ ನಾಳೆ (ಅಕ್ಟೋಬರ್​-1)ರಿಂದ ಅನ್​ಲಾಕ್​-5ನೇ ಹಂತ ಶುರುವಾಗಲಿದ್ದು, ತತ್ಸಂಬಂಧ ಮಾರ್ಗಸೂಚಿಯನ್ನು ಕೇಂದ್ರ ಗೃಹಸಚಿವಾಲಯ ಬಿಡುಗಡೆ ಮಾಡಿದೆ.
ಕೊವಿಡ್​-19 ಸೋಂಕು ವ್ಯಾಪಕವಾಗಿ ಪ್ರಸರಣ ಆಗುತ್ತಿದ್ದರೂ, ಕೆಲವು ರಾಜ್ಯಗಳು ಲಾಕ್​ಡೌನ್​, ಕರ್ಫ್ಯೂವಿನಂತಹ ಕಟ್ಟುನಿಟ್ಟಿನ ಕ್ರಮಗಳನ್ನು ಮುಂದುವರಿಸುತ್ತಿದ್ದರೂ ಕೇಂದ್ರ ಸರ್ಕಾರ ಲಾಕ್​ಡೌನ್​ ನಿರ್ಬಂಧಗಳನ್ನು ಹಂತಹಂತವಾಗಿ ತೆರವುಗೊಳಿಸುತ್ತಿದೆ. ಆರ್ಥಿಕತೆ ದೃಷ್ಟಿಯಿಂದ ಹೆಚ್ಚಿನ ಚಟುವಟಿಕೆಗಳು ಪ್ರಾರಂಭವಾಗುವುದು ಅನಿವಾರ್ಯ ಎಂದು ಹೇಳಿರುವ ಕೇಂದ್ರ ಸರ್ಕಾರ ಅನ್​ಲಾಕ್​-5ನೇ ಹಂತದಲ್ಲಿ , ಬಹುಜನರ ನಿರೀಕ್ಷೆಯಂತೆ ಸಿನಿಮಾ ಥಿಯೇಟರ್​ಗಳು, ಮಲ್ಟಿಪ್ಲೆಕ್ಸ್​ಗಳನ್ನು ತೆರೆಯಲು ಅನುಮತಿ ನೀಡಿದೆ.ಇದನ್ನೂ ಓದಿ:‘ಯೋಗಿ ರಾಜ್ಯದಲ್ಲಿ ಯಾವುದೇ ವಾಹನ..ಯಾವ ಸಮಯದಲ್ಲಿ ಬೇಕಾದ್ರೂ ಉರುಳಬಹುದು’ ಎಂದ ಬಿಜೆಪಿ ಮುಖಂಡ
ಹಾಗೇ ಶಾಲೆಗಳು, ಕಾಲೇಜು, ಶೈಕ್ಷಣಿಕ, ಕೋಚಿಂಗ್​ ಸಂಸ್ಥೆಗಳನ್ನು ಪ್ರಾರಂಭಿಸುವ ಬಗ್ಗೆಯೂ ಅನ್​ಲಾಕ್​-5ರಲ್ಲಿ ಉಲ್ಲೇಖಿಸಲಾಗಿದೆ. ಶಾಲಾ-ಕಾಲೇಜುಗಳ ಪ್ರಾರಂಭಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಅದರ ನಿರ್ಣಯ ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿದೆ. ಆಯಾ ಸರ್ಕಾರಗಳ ಶಿಕ್ಷಣ ಇಲಾಖೆಗಳು ಸೂಕ್ತ ಎಸ್​ಒಪಿ ತಯಾರಿಸಿ, ಆರೋಗ್ಯ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಶಾಲಾ-ಕಾಲೇಜುಗಳ ಪ್ರಾರಂಭ ಮಾಡಬಹುದು ಎಂದು ಹೇಳಲಾಗಿದೆ.(ಏಜೆನ್ಸೀಸ್)
ವಿದ್ಯಾರ್ಥಿಗಳೇ, ಸದ್ಯಕ್ಕೆ ನೀವು ಶಾಲಾ-ಕಾಲೇಜುಗಳಿಗೆ ಹೋಗುವಂತಿಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − fifteen =
Remember me
