ನವದೆಹಲಿ:ದೇಶದಲ್ಲಿ ಕರೊನಾ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಸ್ಥಳೀಯವಾಗಿ ಲಾಕ್​ಡೌನ್ ನಿಯಮಗಳನ್ನು ಜಾರಿಗೊಳಿಸುವ ಅಧಿಕಾರವನ್ನು ರಾಜ್ಯಗಳಿಗೆ ನೀಡುವುದರ ಜತೆಗೆ ಅನೇಕ ನಿಯಮಗಳನ್ನು ಒಳಗೊಂಡ ಅನ್​ಲಾಕ್-6ರ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬುಧವಾರ ಬಿಡುಗಡೆ ಮಾಡಿದೆ. ಡಿಸೆಂಬರ್ 1ರಿಂದ ನೂತನ ಮಾರ್ಗಸೂಚಿ ಜಾರಿಗೆ ಬರಲಿದೆೆ. ಸದ್ಯ ಕೆಲ ಕರೊನಾ ಪ್ರಕರಣ ಉಲ್ಬಣಗೊಳ್ಳುತ್ತಿರುವುದರಿಂದ ಮುಖ್ಯವಾಗಿ ಕಣ್ಗಾವಲು, ನಿಯಂತ್ರಣ ಮತ್ತು ಕಟ್ಟುನಿಟ್ಟಾದ ಪಾಲನೆಯನ್ನು ಒಳಗೊಂಡ ಕಾರ್ಯತಂತ್ರವನ್ನು ಅಳವಡಿಸಿಕೊಳ್ಳಬೇಕು ಎಂದು ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ತಿಳಿಸಿದೆ.
ರಾಜ್ಯಗಳು ಕಂಟೇನ್ಮೆಂಟ್ ವಲಯಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಬಹುದು. ಆದರೆ, ಕಂಟೇನ್ಮೆಂಟ್ ವಲಯದ ಹೊರಗಿನ ಪ್ರದೇಶಗಳಲ್ಲಿ ಲಾಕ್​ಡೌನ್ ನಿಯಮಗಳನ್ನು ಜಾರಿಗೊಳಿಸುವ ಮೊದಲು ಕೇಂದ್ರದ ಅನುಮೋದನೆಯನ್ನು ಪಡೆಯುವುದು ಕಡ್ಡಾಯ ಎಂದು ಸ್ಪಷ್ಟಪಡಿಸಲಾಗಿದೆ.
ಯಾವ್ಯಾವುದಕ್ಕೆ ಅನುಮತಿ?
ಪಂಜಾಬ್​ನಲ್ಲಿ ರಾತ್ರಿ ಕರ್ಫ್ಯೂ
ಪಂಜಾಬ್​ನಲ್ಲಿ ರಾತ್ರಿ ಕರ್ಫ್ಯೂ ಸೇರಿದಂತೆ ಹಲವು ಹೊಸ ನಿರ್ಬಂಧಗಳನ್ನು ಘೋಷಿಸಲಾಗಿದೆ. ಹೋಟೆಲ್, ರೆಸ್ಟೋರೆಂಟ್​ಗಳು ಹಾಗೂ ಮದುವೆ ಛತ್ರಗಳು ರಾತ್ರಿ 9ರ ಬಳಿಕ ಬಾಗಿಲು ಮುಚ್ಚಲಿವೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು ದ್ವಿಗುಣಗೊಳಿಸಿ -ಠಿ; 1 ಸಾವಿರ ರೂ ಹೆಚ್ಚಿಸಲಾಗಿದೆ. ಈ ನಿಯಮಗಳು ಡಿ.1ರಿಂದ ಜಾರಿಗೆ ಬರಲಿವೆ.
ದೇಶದಲ್ಲಿ 92.27 ಲಕ್ಷ ಪ್ರಕರಣ
ಭಾರತದಲ್ಲಿ ಪ್ರತಿದಿನ ಸರಾಸರಿ 45 ಸಾವಿರ ಹೊಸ ಪ್ರಕರಣಗಳು ವರದಿಯಾಗುತ್ತಿದ್ದು, ಒಟ್ಟು ಸಂಖ್ಯೆ 92.27 ಲಕ್ಷ ಏರಿದೆ. 1.34 ಲಕ್ಷ ಮಂದಿ ಕರೊನಾಗೆ ಬಲಿಯಾಗಿದ್ದು, ಈವರೆಗೆ 86.46 ಲಕ್ಷ ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನೂ 4.44 ಲಕ್ಷ ಸಕ್ರಿಯ ಪ್ರಕರಣಗಳಿವೆ.
ಮಾರ್ಗಸೂಚಿಗಳಲ್ಲೇನಿದೆ?
ಶೀಘ್ರ ವೈದ್ಯಕೀಯ ಕಾಲೇಜ್ ಪುನರಾರಂಭ
ಡಿಸೆಂಬರ್ 1ರಂದು ಅಥವಾ ಅದಕ್ಕೂ ಮುನ್ನ ವೈದ್ಯಕೀಯ ಕಾಲೇಜ್​ಗಳ ಪುನರಾರಂಭಕ್ಕೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಸೂಚಿಸಿದೆ. ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ವೈದ್ಯಕೀಯ ಪದವೀಧರರ ತರಬೇತಿಗಾಗಿ ಸಂಯೋಜಿತ ಮೆಡಿಕಲ್ ಕಾಲೇಜ್-ಆಸ್ಪತ್ರೆಗಳಲ್ಲಿ ಕೋವಿಡ್​ಯುೕತರ ಬೆಡ್​ಗಳು ಸಾಕಷ್ಟು ಸಂಖ್ಯೆಯಲ್ಲಿ ಲಭ್ಯವಾಗುವುದನ್ನು ಖಾತರಿಪಡಿಸುವಂತೆಯೂ ಸಲಹೆ ಮಾಡಿದ್ದಾರೆ. ಕರೊನಾ ವೈರಸ್ ಸಾಂಕ್ರಾಮಿಕತೆಯಿಂದಾಗಿ ಮಾರ್ಚ್ ನಿಂದ ದೇಶದಾದ್ಯಂತ ಶಿಕ್ಷಣ ಸಂಸ್ಥೆಗಳು ಮುಚ್ಚಿವೆ.
ಎನ್​ಎಂಸಿ ಶಿಫಾರಸು:ಡಿಸೆಂಬರ್ 1 ಅಥವಾ ಅದಕ್ಕೂ ಮುನ್ನ ವೈದ್ಯಕೀಯ ಶಿಕ್ಷಣ ಸಂಸ್ಥೆಗಳನ್ನು ಪುನಾರಂಭಿಸಬಹುದು ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್​ಎಂಸಿ) ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಕೇಂದ್ರದ ನಿರ್ದೇಶನ ಹೊರಬಿದ್ದಿದೆ. ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಕಾಲೇಜ್​ಗಳು ತರಗತಿ ಪುನರ್ ಆರಂಭಿಸುವಂತೆ ಎನ್​ಎಂಸಿಗೆ ಮನವಿ ಸಲ್ಲಿಸಿದ್ದವು. 2020ರ ಬ್ಯಾಚ್​ನ ಇಂಟರ್ನ್​ಗಳು ಕಡ್ಡಾಯವಾದ ಕ್ಲಿನಿಕಲ್ ತರಬೇತಿ ಪಡೆದಿಲ್ಲ. ಅದನ್ನು ಪೂರ್ಣಗೊಳಿಸದೆ ಅವರು ಪಿಜಿ-ನೀಟ್ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಸಾಧ್ಯವಾಗುವುದಿಲ್ಲ ಎಂದು ಎನ್​ಎಂಸಿ ಹೇಳಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 6 =
Remember me
