ಬೆಂಗಳೂರು:ಮಾರ್ಚ್​ 01ರಂದು ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ವಿಚಾರಣೆಯನ್ನು ಚುರುಕುಗೊಳಿಸಿದ್ದು, ಎಲ್ಲಾ ಆಯಾಮಾದಲ್ಲೂ ತನಿಖೆ ನಡೆಸುತ್ತಿದೆ. ಘಟನೆ ನಡೆದು ತಿಂಗಳೂ ಕಳೆಯುತ್ತ ಬಂದರೂ ಆರೋಪಿಗಳು ಈವರೆಗೆ ಪತ್ತೆಯಾಗದಿರುವುದು ತನಿಖಾ ಸಂಸ್ಥೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಸಹಕರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪ್ರಕಟಣೆ ಹೊರಡಿಸಿರುವ ಎನ್ಐಎ, ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಭಾಗವಾಗಿ ದೇಶದ 18 ಕಡೆಗಳಲ್ಲಿ ದಾಳಿ ಮಾಡಲಾಗಿದ್ದು, ಬಾಂಬ್ ಇಟ್ಟ ಮುಸಾವೀರ್ ಹಾಗೂ ಇದಕ್ಕೆ ರೂಪುರೇಷೆ ಸಿದ್ದಪಡಿಸಿದ ಅಬ್ದುಲ್ ಮತೀನ್ ತಾಹ ಇಬ್ಬರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಇವರಿಗೆ ಸಹಾಯ ಮಾಡಿದ ಮುಜಾಮಿಲ್ ಷರೀಫ್ ಎಂಬಾತನನ್ನು ಬಂಧನ ಮಾಡಲಾಗಿದೆ.
pic.twitter.com/SLJgVBPISA
ಇದನ್ನೂ ಓದಿ:ಸೋಲೋ ಪಂದ್ಯವನ್ನು ಗೆಲ್ಲಿಸಿದವನಿಗೆ ಕೃತಜ್ಞತೆ ತೋರದ ಪಂಜಾಬ್​ ಕಿಂಗ್ಸ್​
ತನಿಖೆಯ ಭಾಗವಾಗಿ ಆರೋಪಿಗಳ ಸಂಬಂಧಿಕರು, ಸ್ನೇಹಿತರು, ಬಂಧಿತ ಆರೋಪಿಗಳು ಎಲ್ಲರ ವಿಚಾರಣೆ ನಡೆಯುತ್ತಿದೆ. ಇದು ಭಯೋತ್ಪಾದಕ ಕೃತ್ಯ ಆಗಿರುವುದರಿಂದ ವಿಚಾರಣೆ ಮಾಡುವವರ ವಿವರಗಳನ್ನ ಬಹಿರಂಗಪಡಿಸುವುದು ತನಿಖೆಗೆ ಹಿನ್ನಡೆ ಆಗುತ್ತೆ. ಹೀಗಾಗಿ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಸಹಕರಿಸಲು ಎನ್​ಎಐ ತನ್ನ ಪ್ರಕಟಣೆಯಲ್ಲಿ ಮನವಿ ಮಾಡಿದೆ.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಆರೋಪಿಗಳಾದ ಅಬ್ದುಲ್​ ಮತೀನ್ ತಾಹ, ಮುಸಾವೀರ್​ ಪತ್ತೆಗೆ ಎನ್​ಐಎ ತಲೆ ಕೆಡಿಸಿಕೊಂಡಿದೆ. ಈಗಾಗಲೇ ಆರೋಪಿಗಳ ಬಗ್ಗೆ ಸುಳಿವು ನೀಡಿದರೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್​ಐಎ ಘೋಷಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 7 =
Remember me
