ಲಖನೌ:ಬ್ಯಾಲೆಸ್ಟ್​ ಕಲ್ಲುಗಳು ತುಂಬಿದ್ದ ಲಾರಿ ಬಸ್​ ಮೇಲೆ ಉರುಳಿದ ಪರಿಣಾಮ 11 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಶಹಜಹಾನ್​ಪುರದಲ್ಲಿ ನಡೆದಿದೆ. ಶನಿವಾರ ತಡರಾತ್ರಿ ಈ ಘಟನೆ ನಡೆದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಶೋಕ್​ ಕುಮಾರ್​ ಮೀನಾ, ರಾತ್ರಿ 11 ಗಂಟೆ ಸುಮಾರಿಗೆ ಖುತಾರ್​ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿರುವ ಹೆದ್ದಾರಿಯ ಪಕ್ಕದಲ್ಲಿರು ಡಾಭಾದ ಬಳಿ ಉತ್ತರಾಖಂಡಕ್ಕೆ ಭಕ್ತಾಧಿಗಳುನ್ನು ಹೊತ್ತೊಯ್ಯುತ್ತಿದ್ದ ಬಸ್​ ಮೇಲೆ ಬ್ಯಾಲೆಸ್ಟ್​ ಕಲ್ಲುಗಳು ತುಂಬಿದ್ದ ಲಾರಿ ಉರುಳಿದೆ.
ಘಟನೆ ನಡೆದ ವೇಳೆ ಕೆಲವರು ಬಸ್​ನಲ್ಲಿದ್ದರು ಮತ್ತು ಇನ್ನೂ ಕೆಲವರು ಡಾಭಾದಲ್ಲಿ ಊಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ದುರ್ಘಟನೆಯಲ್ಲಿ 11 ಮಂದಿ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಧಿಕಾರಿಗಳು ಸಲ್ಲಿಸುವ ವರದಿ ಆಧರಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಶೋಕ್​ ಕುಮಾರ್​ ಮೀನಾ ತಿಳಿಸಿದ್ದಾರೆ.
यूपी के शाहजहांपुर में देर भयानक सड़क हादसा। पूर्णागिरी माता के दर्शन को जा रहे श्रद्धालुओं की खड़ी बस के ऊपर मिट्टी से भरा डंपर पलट गया। जिसमें 11 लोगों की दर्दनाक मौत। 20 से ज्यादा लोग घायल बताएं जा रहे हैं। सभी लोग सीतापुर के रहने वाले थे।@Uppolice#Shahjahanpurpic.twitter.com/daWhLARXlc
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − nineteen =
Remember me
