ಉತ್ತರಪ್ರದೇಶ:ಕಾರಿಗೆ ಬೆಂಕಿ ತಗುಲಿ ಮದುವೆಗೆ ತೆರಳುತ್ತಿದ್ದ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಬರೇಲಿ-ನೈನಿತಾಲ್ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.
ಉತ್ತರ ಪ್ರದೇಶದ ಭೋಜಿಪುರ ಬಳಿಯ ಬರೇಲಿ-ನೈನಿತಾಲ್ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಭೋಜಿಪುರ ಪೊಲೀಸ್ ಠಾಣೆ ಬಳಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ನಂತರ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಮಗು ಸೇರಿದಂತೆ ಕಾರಿನಲ್ಲಿದ್ದ ಎಂಟು ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಕಾರಿನಲ್ಲಿದ್ದವರು ಬರೇಲಿ ನಗರದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿ ಕಾರಿನಿಂದ ಶವಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.ಕಾರು ಮತ್ತು ಟ್ರಕ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿರುವ ಭಯಾನಕ ವಿಡಿಯೋ ಅಂತರ್ಜಾಲದಲ್ಲಿ  ವೈರಲ್​ ಆಗುತ್ತಿದೆ.
Uttar Pradesh Road#Accident: Eight Killed As Car Collides With Truck and Catches Fire After Being Dragged On Highway Near Bhojipura…#CarAccident#RoadAccident#Bhojipura#Bareilly#UttarPradeshpic.twitter.com/gqQxbcP94L
— Devesh , वनवासी (@Devesh81403955)December 10, 2023

ಈ ಕುರಿತಾಗಿ ಮಾತನಾಡಿದ ಪೊಲೀಸ್ ಅಧಿಕಾರಿ, ಕಾರು, ಟ್ರಕ್​ ಡಿಕ್ಕಿ ಹೊಡೆದು ಒಂದು ಮಗು ಸೇರಿದಂತೆ ಎಂಟು ಜನರು ತಮ್ಮ ಕಾರಿನಲ್ಲಿ ಸುಟ್ಟು ಕರಕಲಾದರು. ಮದುವೆಯೊಂದರಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದರು. ಕಾರು ಲಾಕ್ ಆಗಿದ್ದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಜ್ವಾಲೆಯು ನಿಯಂತ್ರಣಕ್ಕೆ ಬರುವಷ್ಟರಲ್ಲಿ ಹೆಚ್ಚಿನ ಸಂತ್ರಸ್ತರು ಬೆಂಕಿಗೆ ತುತ್ತಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಅಪಘಾತದಿಂದ  ಸಂಚಾರ ದಟ್ಟಣೆ ಉಂಟಾಗಿದೆ. ಕ್ರೇನ್ ಮೂಲಕ ಕಾರು ಮತ್ತು ಟ್ರಕ್ ರಸ್ತೆಯಿಂದ ತೆಗೆದುಹಾಕಲಾಯಿತು. ಮೃತದೇಹಗಳನ್ನು ಸುಮಾರು 1 ಗಂಟೆಯ ನಂತರ ಹೊರತೆಗೆಯಲಾಯಿತು, ಇದು ಸಾಮಾನ್ಯ ಸಂಚಾರವನ್ನು ಪುನರಾರಂಭಿಸಲು ಅನುವು ಮಾಡಿಕೊಡಲಾಯಿತ್ತು.
ರಾಮಮಂದಿರ ನಿರ್ಮಾಣ; ಅಯೋಧ್ಯೆಯ ಸುತ್ತಮುತ್ತಲಿನ ಭೂಮಿಗೆ ಬಂತು ಬಂಗಾರದ ಬೆಲೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × one =
Remember me
