ಕೋಲ್ಕತ್ತಾ:ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರೈಲು ದುರಂತದ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಕಾಂಚನಜುಂಗಾ ರೈಲು ಅಪಘಾತ: ಘಟನಾ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ದುರಂತ ರೈಲು ಅಪಘಾತದದಲ್ಲಿ ಹಲವು ಮಂದಿ ಪ್ರಾಣ ಕಳೆದುಕೊಂಡಿರುವ ಬಗ್ಗೆ ತಿಳಿದು ಆಘಾತವಾಯಿತು. ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ಅವರು, ಗಾಯಗೊಂಡಿರುವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಶ್ರೀರಾಮನಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಇಂದು (ಸೋಮವಾರ) ಬೆಳಗ್ಗೆ ಪಶ್ಚಿಮ ಬಂಗಾಳದ ನ್ಯೂ ಜಲ್​ಪೈಗುರಿ ಜಿಲ್ಲೆಯ ರಂಗಪಾಣಿ ಬಳಿ ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದಿದ್ದು, ಈ ರೈಲು ದುರಂತದಲ್ಲಿ 15 ಜನ ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ನಿಲ್ದಾಣ ಸಮೀಪ ಸಿಗ್ನಲ್‌ಗಾಗಿ ಕಾಯುತ್ತಿದ್ದ ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಹಿಂದಿನಿಂದ ಗೂಡ್ಸ್‌ ರೈಲು ಬಂದು ಡಿಕ್ಕಿ ಹೊಡೆದಿದೆ. ಘಟನೆಯಿಂದ ರೈಲಿನ ಎರಡು ಬೋಗಿಗಳಿಗೆ ಭಾರೀ ಹಾನಿಯಾಗಿದೆ. ಪ್ರಯಾಣಿಕರ ಸಾವು ನೋವು ಹೆಚ್ಚಿನ ಸಂಖ್ಯೆಯಲ್ಲಿರುವ ಸಾಧ್ಯತೆಗಳಿದ್ದು, ಸದ್ಯ ರಕ್ಷಣಾ ಕಾರ್ಯಾಚರಣೆಯು ನಡೆಯುತ್ತಿದೆ.
ಮಾನವ ನಿರ್ಲಕ್ಷ್ಯ ಕಾರಣ?:ಮೇಲ್ನೋಟಕ್ಕೆ ಈ ಅಪಘಾತಕ್ಕೆ ಮಾನವ ದೋಷವನ್ನು ಕಾರಣವೆಂದು ಸೂಚಿಸುತ್ತದೆ. ಸಿಗ್ನಲ್ ನಿರ್ಲಕ್ಷ್ಯವಾಗಿರಬಹುದು. ರೈಲ್ವೆ ಕವಚ ಯೋಜನೆಯನ್ನು ವಿಸ್ತರಿಸುವ ಅಗತ್ಯವಿದೆ ಎಂದು ರೈಲ್ವೆ ಮಂಡಳಿಯ ಅಧ್ಯಕ್ಷ ಮತ್ತು ಸಿಇಒ ಜಯ ವರ್ಮ ಸಿನ್ಹಾ ತಿಳಿಸಿದ್ದಾರೆ.
ಮೃತರಿಗೆ ಪ್ರಧಾನಿ ಮೋದಿ ಪರಿಹಾರ:ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲ್ವೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಮೃತರ ಸಂಬಂಧಿಕರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ, ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಜಾರ್ಖಂಡ್​ನಲ್ಲಿ ನಡೆದ ಎನ್‌ಕೌಂಟರ್​ನಲ್ಲಿ ನಾಲ್ವರು ನಕ್ಸಲರ ಹತ್ಯೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + one =
Remember me
