ಲಖನೌ: ಆಗ್ರಾದಲ್ಲಿ ನಿರ್ಮಾಣ ಹಂತದಲ್ಲಿರುವ ಮೊಘಲ್​ ಮ್ಯೂಸಿಯಂ ಹೆಸರನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಬದಲಿಸಿದ್ದಾರೆ. ನಾವು ಭಾರತೀಯರು..ನಮಗೆ ಮೊಘಲರು ಎಂದಿಗೂ ಆದರ್ಶವಲ್ಲ ಎಂದು ಹೇಳಿದ ಯೋಗಿ, ಮ್ಯೂಸಿಯಂಗೆ ‘ಛತ್ರಪತಿ ಶಿವಾಜಿ ಮಹಾರಾಜ’ರ ನಾಮಕರಣ ಮಾಡಿದ್ದಾರೆ.
ಇಂದು ಆಗ್ರಾ ವಿಭಾಗದ ಅಭಿವೃದ್ಧಿ ಕಾರ್ಯಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅನುಮೋದನೆ ನೀಡಿದ ಸಿಎಂ ಯೋಗಿ ಆದಿತ್ಯನಾಥ್​ ಅವರು, ಸದ್ಯ ನಿರ್ಮಾಣ ಹಂತದಲ್ಲಿರುವ ಮೊಘಲ್​ ಮ್ಯೂಸಿಯಂ ಹೆಸರು ಬದಲಾವಣೆ ಆಗುತ್ತದೆ. ಛತ್ರಪತಿ ಶಿವಾಜಿ ಮಹಾರಾಜ್​ ಮ್ಯೂಸಿಯಂ ಎಂಬ ಹೆಸರಿನಲ್ಲಿ ಸ್ಥಾಪಿತವಾಗುತ್ತದೆ. ರಾಷ್ಟ್ರೀಯತೆ ಸಿದ್ಧಾಂತಗಳನ್ನು ಪೋಷಿಸುವುದು ಉತ್ತರ ಪ್ರದೇಶ ಸರ್ಕಾರದ ಮೊದಲ ಆದ್ಯತೆ. ನಮ್ಮ ರಾಷ್ಟ್ರದ ಹೆಮ್ಮೆ ಉಂಟು ಮಾಡುವ ವಿಚಾರಗಳನ್ನು ಉತ್ತೇಜಿಸುವ ಅವಶ್ಯಕತೆ ಇದೆ. ಹಾಗೇ ಗುಲಾಮಗಿರಿ ಮನಸ್ಥಿತಿಯನ್ನು ತೊಡೆದುಹಾಕಬೇಕು ಎಂದು ಹೇಳಿದ್ದಾರೆ.ಇದನ್ನೂ ಓದಿ:15 ದಿನ ಶಿರಾದಲ್ಲೇ ಮೊಕ್ಕಾಂ ಹೂಡಲಿದ್ದಾರೆ ಮಾಜಿ ಸಿಎಂ ಕುಮಾರಸ್ವಾಮಿ
ಅಷ್ಟೇ ಅಲ್ಲ, ಮೊಘಲರು ಯಾವತ್ತೂ ನಮ್ಮ ನಾಯಕರು ಅಲ್ಲ…ಶಿವಾಜಿ ಮಹಾರಾಜ ನಮ್ಮ ನಿಜವಾದ ಹೀರೋ ಎಂದು ಯೋಗಿ ತಿಳಿಸಿದ್ದಾರೆ. ಈ ಮ್ಯೂಸಿಯಂನಲ್ಲಿ ಛತ್ರಪತಿ ಶಿವಾಜಿ ಮಹಾರಾಜರಿಗೆ ಸಂಬಂಧಪಟ್ಟ ವಸ್ತುಗಳು, ದಾಖಲೆಗಳನ್ನೂ ಇಡಲಾಗುವುದು. ಅದಕ್ಕೆ ಸಂಬಂಧಪಟ್ಟಂತೆ ಗ್ಯಾಲರಿ ನಿರ್ಮಾಣ ಮಾಡುವಂತೆ ಪ್ರವಾಸೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಮಾರ್​ ಮತ್ತು ಆಗ್ರಾ ಪ್ರವಾಸೋದ್ಯಮ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವಿವರಿಸಿದ್ದಾರೆ. (ಏಜೆನ್ಸೀಸ್​)
ಮುಂಬೈ ಬಿಡುತ್ತಿದ್ದಂತೆ ಆದಿತ್ಯ ಠಾಕ್ರೆ ವಿರುದ್ಧ ಗಂಭೀರ ಆರೋಪ ಮಾಡಿದ ಕಂಗನಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
