ರಾಜಸ್ಥಾನ:11 ದಿನಗಳ ಹಿಂದೆ ರಾಜಸ್ಥಾನದ ಕೋಟಾದಲ್ಲಿರುವ ಹಾಸ್ಟೆಲ್‌ನಿಂದ ನಾಪತ್ತೆಯಾಗಿದ್ದ ಜೆಇಇ ಆಕಾಂಕ್ಷಿಯನ್ನು ಇದೀಗ ಪೊಲೀಸರು ಹಿಮಾಚಲ ಪ್ರದೇಶದಲ್ಲಿ ಪತ್ತೆಹಚ್ಚಿದ್ದು, ಕೂಡಲೇ ಆತನನ್ನು ಸುರಕ್ಷಿತವಾಗಿ ಅವರ ಕುಟುಂಬಸ್ಥರಿಗೆ ಒಪ್ಪಿಸಿದ ಘಟನೆ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಸಮಸ್ಯೆಯ ಸುಳಿಯಲ್ಲಿರುವ ಪೇಟಿಎಂ ಷೇರುಗಳಲ್ಲಿ ಹೂಡಿಕೆ ಮಾಡುವುದು ಸೂಕ್ತವೇ?: ಮಾರುಕಟ್ಟೆ ತಜ್ಞರು ಏನು ಹೇಳುತ್ತಾರೆ?
ಯುವಕ ಪಿಯೂಷ್ ಫೆಬ್ರವರಿ 13ರಂದು ಕೋಟಾದಲ್ಲಿರುವ ತನ್ನ ಹಾಸ್ಟೆಲ್ ಕೊಠಡಿಯಿಂದ ನಾಪತ್ತೆಯಾಗಿದ್ದ ಎಂದು ಹೇಳಲಾಗಿದೆ. ಖಿನ್ನತೆಯಿಂದ ಬಳಲುತ್ತಿದ್ದ ಯುವಕ ಯಾರಿಗೂ ಹೇಳದೆ ರೈಲಿನಲ್ಲಿ ಧರ್ಮಶಾಲಾಗೆ ಹೋಗಿದ್ದ. ಉತ್ತರಪ್ರದೇಶದ ಬುಲಂದ್‌ಶಹರ್‌ ಮೂಲದ ಪಿಯೂಷ್‌ ಕಳೆದ ಎರಡು ವರ್ಷಗಳಿಂದ ಜೆಇಇಗೆ ತಯಾರಿ ನಡೆಸುತ್ತಿದ್ದ. ಅವನ ದಿಢೀರ್​ ಕಣ್ಮರೆಯಿಂದ ಕುಟುಂಬ ಸದಸ್ಯರು ತೀವ್ರ ಕಳವಳವನ್ನು ವ್ಯಕ್ತಪಡಿಸಿದ್ದರು.
ತಮ್ಮ ಮಗ ನಾಪತ್ತೆಯಾಗಿದ್ದಾನೆ ಹುಡುಕಿಕೊಡಿ ಎಂದು ಪೋಷಕರು ದೂರು ನೀಡಿದ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿದ ಪೊಲೀಸರು, ಆತನಿಗಾಗಿ ಅನೇಕ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದರು. ಸತತ ಪ್ರಯತ್ನಗಳ ನಂತರ ಆತ ಹಿಮಾಚಲ ಪ್ರದೇಶದಲ್ಲಿ ಧರ್ಮಶಾಲಾದಲ್ಲಿ ಕಾಣಿಸಿಕೊಂಡ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿದೆ. ಕೂಡಲೇ ಧರ್ಮಶಾಲೆಗೆ ತೆರಳಿದ ಪೊಲೀಸರು, ಆತನನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.
ಇದನ್ನೂ ಓದಿ:ಬಸವಣ್ಣ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಸಿಎಂ ಸಿದ್ದರಾಮಯ್ಯ ಅವರ ಅಭಿನಂದನಾ ಸಮಾರಂಭ ಮಾರ್ಚ್ ನಲ್ಲಿ ಆಯೋಜನೆ
“ನಾವು ಆತನನ್ನು ಪತ್ತೆಹಚ್ಚಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದ್ದೆವು. ಧರ್ಮಶಾಲಾದಲ್ಲಿ ಅವನು ಕಾಣಿಸಿಕೊಂಡಿರುವ ಬಗ್ಗೆ ನಮಗೆ ಮಾಹಿತಿ ಬಂತು. ನಾನು ಅಲ್ಲಿನ ಎಸ್ಪಿ ಮೇಡಂ ಮತ್ತು ಸ್ಥಳೀಯ ಪೊಲೀಸರೊಂದಿಗೆ ಮಾತನಾಡಿದೆ. ನಮ್ಮ ಪೊಲೀಸ್ ತಂಡವು ಅಲ್ಲಿಗೆ ಹೋಗಿ ಅವನನ್ನು ಪತ್ತೆಹಚ್ಚಿತು” ಎಂದು ಅಧಿಕಾರಿಯೊಬ್ಬರು ಹೇಳಿದರು,(ಏಜೆನ್ಸೀಸ್).
IPL 2024, CSK vs RCB: ಮೊದಲ ಪಂದ್ಯ ಸೋತರೂ ಆರ್​​ಸಿಬಿ ಫ್ಯಾನ್ಸ್​ ಕುಗ್ಗಲ್ಲ! ಬದಲಿಗೆ ಹೇಳೋದು ಮಾತ್ರ ಇದೊಂದೇ….

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − twelve =
Remember me
