ಹಮೀರ್​ಪುರ:ಪಟಾಕಿ ಚೀಲದ ಮೇಲೆ ಜೀಪ್ ಚಲಾಯಿಸಲೆತ್ನಿಸಿದ್ದ ಪರಿಣಾಮ ಭೀಕರ ಸ್ಫೋಟ ಉಂಟಾಗಿ ಆ ಜೀಪ್ ಬಾನೆತ್ತರಕ್ಕೆ ಚಿಮ್ಮಿ ಕೆಳಕ್ಕೆ ಬಿದ್ದ ಪರಿಣಾಮ ಆರು ಜನ ಗಾಯಗೊಂಡಿದ್ದಾರೆ. ಅಲ್ಲಿದ್ದ ನಾಲ್ಕು ವಾಹನಗಳು ಜಖಂ ಆಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಮೀರ್​ಪುರದಲ್ಲಿ ಮಂಗಳವಾರ ಅಪರಾಹ್ನ ಈ ದುರಂತ ಸಂಭವಿಸಿದ್ದು, ಗಾಯಾಳುಗಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ನರೇಂದ್ರ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಇದನ್ನೂ ಓದಿ:1.25 ಲಕ್ಷ ಕೋಟಿ ರೂಪಾಯಿ – ಸೈಬರ್ ಕ್ರೈಂನಿಂದಾಗಿರುವ ನಷ್ಟ: ಇನ್ನೂ ಹೆಚ್ಚಾಗಲಿದೆಯಂತೆ ಅಪರಾಧ!
ಸ್ಫೋಟಕ್ಕೆ ಕಾರಣವೇನು ಎಂದು ಪರಿಶೀಲಿಸಲು ಫಾರೆನ್ಸಿಕ್ ಪರಿಣತರು ಸ್ಥಳಕ್ಕಾಗಮಿಸಿದ್ದು, ಮೇಲ್ನೋಟಕ್ಕೆ ಜೀಪ್​ ಪಟಾಕಿ ಚೀಲದ ಮೇಲೇರಿದ್ದೇ ಕಾರಣ ಎಂಬ ನಿರ್ಣಯಕ್ಕೆ ಬಂದಿದ್ದಾರೆ. ವಾಹನವನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್)
ಅಂತಿಮ ಹಂತದಲ್ಲಿದೆ ಸೈಬರ್ ಸೆಕ್ಯುರಿಟಿಗೆ ಸಂಬಂಧಿಸಿದ ಎನ್​ಸಿಎಸ್ಎಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − seven =
Remember me
