ಮೀರತ್​:ಭೀಕರ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ಮೀರತ್‌ನಲ್ಲಿ ವ್ಯಕ್ತಿಯೊಬ್ಬ ಎರಡು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಬಾಲಕಿಯ ಮನೆಯವರು ಆತನನ್ನು ಹಿಂಬಾಲಿಸಿಕೊಂಡು ಹೊದಾಗ ಆತ ಹೆದರಿಕೊಂಡು ಆ ಮಗುವನ್ನು ಚರಂಡಿಗೆ ಎಸೆದು ಓಡಿಹೋಗಿದ್ದಾನೆ, ತೀವ್ರವಾದ ಗಾಯದಿಂದಾಗಿ ಆ ಬಾಲಕಿ ಮೃತಪಟ್ಟಿದ್ದು, ಆಕೆಯ ಶವ ಚರಂಡಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಮೂಡ ಹಗರಣ | ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ: ಸಚಿವ ಎಂ‌ ಬಿ ಪಾಟೀಲ
ಘಟನೆ ಕುರಿತು ವಿವರಗಳನ್ನು ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಆಯುಷ್ ವಿಕ್ರಮ್ ಸಿಂಗ್, ಶುಕ್ರವಾರ ತಡರಾತ್ರಿ ಮೋಯಿಶ್ (20) ಎಂಬಾತ ಮೀರತ್‌ನ ಸದರ್ ಪ್ರದೇಶದಲ್ಲಿ ಮನೆಯಿಂದ ಹೊರಗೆ ತನ್ನ ಕುಟುಂಬದ ಸದಸ್ಯರೊಂದಿಗೆ ಮಲಗಿದ್ದ ಅಪ್ರಾಪ್ತ ಬಾಲಕಿಯನ್ನು ತನ್ನ ಮನೆಯ ಹೊರಗಿನಿಂದ ಅಪಹರಿಸಿದ ಘಟನೆ ನಡೆದಿದೆ.
ಕುಟುಂಬ ಸದಸ್ಯರು ಎಚ್ಚರಗೊಂಡ ನಂತರ, ತಮ್ನ ಮನೆಯ ಮಗು ಇಲ್ಲವೆಂದು ಗೊತ್ತಾಗಿದೆ. ತಕ್ಷಣ ಆರೋಪಿಯನ್ನು ಹಿಂಬಾಲಿಸಿ ಹೋಗಿದ್ದಾರೆ. ಆದರೆ, ಆತ ಆ ಬಾಲಕಿಯನ್ನು ಚರಂಡಿಗೆ ಎಸೆದು ಸ್ಥಳದಿಂದ ಪರಾರಿಯಾಗಿದ್ದಾನೆ. ಇದರಿಂದ ಮಗು ಸಾವನ್ನಪ್ಪಿದೆ ಎಂದು ತಿಳಿಸಿದ್ದಾರೆ.
ಇದಲ್ಲದೆ, ಆರೋಪಿಯನ್ನು ಬಂಧಿಸಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಎಸ್ಪಿ ಆಯುಷ್ ಸಿಂಗ್ ಹೇಳಿದ್ದಾರೆ. ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಎರಡು ಅತ್ಯಾಚಾರ ಪ್ರಕರಣಗಳ ಬೆನ್ನಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ.
ನೈತಿಕ ಹೊಣೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − four =
Remember me
