ಉತ್ತರಪ್ರದೇಶ: ಶಾಲಾ ಬಾಲಕಿಯ ಮೇಲೆ ವ್ಯಕ್ತಿಯೋರ್ವ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ಉತ್ತರಪ್ರದೇಶದಲ್ಲಿ ವರದಿಯಾಗಿದೆ. ಜಿಲ್ಲೆಯ ಮೋದಿನಗರ ಪ್ರದೇಶದಲ್ಲಿ ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಅಪರಿಚಿತ ವ್ಯಕ್ತಿಯೋರ್ವ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ. ದಾಳಿಯಲ್ಲಿ 9 ನೇ ತರಗತಿ ವಿದ್ಯಾರ್ಥಿನಿ ಬಾಲಕಿಗೆ ತೀವ್ರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಕುರಿತಂತೆ, ಸಹಾಯಕ ಪೊಲೀಸ್ ಕಮಿಷನರ್ ಜ್ಞಾನ್ ಪ್ರಕಾಶ್ ರೈ ಮಾತನಾಡಿದ್ದು, ಅಪ್ರಾಪ್ತ ಬಾಲಕಿ ಗುರುವಾರ ಟ್ಯೂಷನ್‌ಗೆ ಹೋಗುತ್ತಿದ್ದಾಗ ಜಗತ್‌ಪುರಿ ಕಾಲೋನಿಯಲ್ಲಿ ಶೌಕಿನ್ ಎಂಬಾತನಿಂದ ಹಲ್ಲೆ ನಡೆಸಲಾಯಿತು. ಸದ್ಯ ದಾಳಿಯಲ್ಲಿ 9 ಬಾರಿ ಗಾಯಗೊಂಡ ಬಾಲಕಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದುಯ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಶೌಕಿನ್ ಹಲ್ಲೆ ಮಾಡಿದ ಹುಡುಗಿಯ ಪರಿಚಯ ಆತನಿಗೆ ಮೊದಲೇ ಇತ್ತು. ಆಕೆ ತೆರಳುತ್ತಿದ್ದ ಶಾಲೆಗೆ ಆಕೆ ಹೋಗಬಾರದು ಎಂಬ ನಿಟ್ಟಿನಲ್ಲಿ ಈ ರೀತಿ ಮಾಡಿದ್ದಾನೆ ಎನ್ನಲಾಗಿದೆ.
ಘಟನೆ ನಡೆದ ಸಂದರ್ಭ ದಾಳಿಕೋರನನ್ನು ಪಕ್ಕದಲ್ಲಿದ್ದವರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ ಶೌಕಿನ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಪೊಲೀಸರ ಪಿಸ್ತೂಲ್ ಕಸಿದುಕೊಂಡು ಗುಂಡು ಹಾರಿಸಿದ್ದಾನೆ.
ಶೌಕಿನ್​ನನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಪೊಲೀಸ್ ಸಿಬ್ಬಂದಿಯ ಪಿಸ್ತೂಲ್ ಕಸಿದುಕೊಂಡು ಗುಂಡು ಹಾರಿಸಿದ್ದಾನೆ. ಈ ಸಂದರ್ಭ ಪಿಸ್ತೂಲಿನ ಗುಂಡು ಆತನ ಕಾಲಿಗೇ ತಗುಲಿದೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:5 × 1 =
Remember me
