ಲಖನೌ:ಕೋಳಿ ಸಾರು ಮಾಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಹೆಂಡತಿ ಜೊತೆ ಗಂಡ ಜಗಳವಾಡಿಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದ ಝಾನ್ಸಿ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಪವನ್​​ ಕುಮಾರ್​ ಎಂದು ಗುರುತಿಸಲಾಗಿದ್ದು ಪೀಠೋಪಕರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಗುರುವಾರ ಸಂಜೆ ಪವನ್​ ತನಗಾಗಿ ಕೋಳಿ ಸಾರು ಮಾಡುವಂತೆ ತನ್ನ ಪತ್ನಿಗೆ ಹೇಳಿದ್ದಾನೆ. ಇದಕ್ಕೊಪ್ಪದ ಆತನ ಮಡದಿ ಮನೆಯಲ್ಲಿ ಅಡುಗೆ ಸಿದ್ದಪಡಿಸಿರುವುದಾಗಿ ತಿಳಿಸಿದ್ದಾಳೆ.
ಇದನ್ನೂ ಓದಿ:ಕಾಂಗ್ರೆಸ್ ಅಕ್ರಮ ನಡೆಸಿ ಚುನಾವಣೆ ಗೆದ್ದಿದೆ, ಮಿಸ್ಟರ್ ಸಿದ್ದರಾಮಯ್ಯ ಧೈರ್ಯವಿದ್ದರೆ ತನಿಖೆ ನಡೆಸಿ: ಎಚ್​ಡಿಕೆ ಸವಾಲು
ಶೀಘ್ರವೇ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ದಂಪತಿಗಳಿಬ್ಬರ ನಡುವೆ ಹೊಡೆದಾಟವಾಗಿದ್ದು ಈ ವೇಳೆ ಪತ್ನಿ ಬೇರೊಂದು ಕೋಣೆಗೆ ಹೋಗಿ ಮಲಗಿದ್ದಾಳೆ. ಇದಾದ ಕೆಲವೇ ಕ್ಷಣಗಳ ಬಳಿಕ ಪವನ್​ ನೇಣಿಗೆ ಶರಣಾಗಿರುವುದ ಬೆಳಕಿಗೆ ಬಂದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಪವನ್​ ಸಹೋದರ ಗಲಾಟೆ ಬಳಿಕ ದಂಪತಿಗಳಿಬ್ಬರು ಪ್ರತ್ಯೇಕ ಕೋಣೆಗೆ ತೆರಳಿದ್ದರು. ಈ ವೇಳೆ ನನ್ನ ಸಹೋದರ ತುಂಬಾ ಹೊತ್ತಾದರೂ ರೂಮಿನ ಬಾಗಿಲನ್ನು ತೆರದಿರಲಿಲ್ಲ ಅನುಮಾನಗೊಂಡು ಕಿಟಕಿಯ ಮೂಲಕ ನೋಡಿದಾಗ ಆತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 14 =
Remember me
