ಲಖನೌ:ತನಗೆ ಹುಟ್ಟುವ ಮಗು ಗಂಡೋ? ಅಥವಾ ಹೆಣ್ಣೋ? ಎಂದು ತಿಳಿಯಲು ಐದು ಹೆಣ್ಣುಮಕ್ಕಳ ತಂದೆಯೊಬ್ಬ ಗರ್ಭಿಣಿ ಪತ್ನಿಯ ಉದರ ಸೀಳಿರುವ ಪೈಶಾಚಿಕ ಘಟನೆ ಉತ್ತರ ಪ್ರದೇಶದ ಬುಡಾನ್​ ಜಿಲ್ಲೆಯಲ್ಲಿ ಶನಿವಾರ ಸಂಜೆ ನಡೆದಿದೆ.
ಪತಿಯ ಕೃತ್ಯದಿಂದ ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಬರೇಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮಂದುವರಿದಿದೆ. ಆರೋಪಿ ಪತಿಯನ್ನು ಪನ್ನಲಾಲ್​ ಎಂದು ಗುರುತಿಸಲಾಗಿದೆ. ಈತ ಸಿವಿಲ್​ ಲೈನ್​ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಬರುವ ನೇಕ್​ಪುರ್​ ನಿವಾಸಿಯಾಗಿದ್ದು, 35 ವರ್ಷದ ಗರ್ಭಿಣಿ ಪತ್ನಿಯ ಹೊಟ್ಟೆಯನ್ನು ಚೂಪಾದ ಸಾಧನದಿಂದ ಸೀಳಿದ್ದಾನೆಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಇದನ್ನೂ ಓದಿ:VIDEO| ಜೇಡವು ಪಕ್ಷಿ ತಿನ್ನುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲಿದೆ ಮೈನವಿರೇಳಿಸೋ ವಿಡಿಯೋ!
ಎಫ್​ಐಆರ್​ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ನಿಖರವಾದ ಕಾರಣ ಇನ್ನು ತಿಳಿದುಬಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಆದರೆ, ಕುಟುಂಬದ ಮೂಲಗಳು ಹೇಳುವ ಪ್ರಕಾರ, ಪನ್ನಲಾಲ್​ಗೆ ಈಗಾಗಲೇ ಐದು ಹೆಣ್ಣು ಮಕ್ಕಳಿದ್ದು, ಗಂಡು ಮಗು ಆಗಬೇಕೆಂಬ ಬಯಕೆ ಇತ್ತಂತೆ. ಹೀಗಾಗಿ ಭ್ರೂಣದಲ್ಲಿರುವ ಮಗು ಗಂಡೋ ಅಥವಾ ಹೆಣ್ಣೋ ಎಂದು ತಿಳಿದುಕೊಳ್ಳು ಉದರ ಸೀಳಿದ್ದಾನೆಂದು ಆರೋಪಿಸಿದ್ದಾರೆ.
ಸಂತ್ರಸ್ತ ಮಹಿಳೆ ಏಳು ತಿಂಗಳ ಗರ್ಭಿಣಿಯಾಗಿದ್ದಳು ಎಂದಿರುವ ಪೊಲೀಸ್​ ಅಧಿಕಾರಿಗಳು ತನಿಖೆ ಮುಂದುವರಿಸಿದ್ದೇವೆಂದು ತಿಳಿಸಿದ್ದಾರೆ.(ಏಜೆನ್ಸೀಸ್​)
Video: ಈ ವಿಡಿಯೋ ನಿಮ್ಮ ಮನಕಲಕುತ್ತೆ; ವಿಶೇಷ ಸ್ನೇಹಿತನ ಪ್ರತಿಭೆಗೆ ಅದಿತಿ ಫಿದಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
