ಉತ್ತರಪ್ರದೇಶ:ಇತ್ತೀಚಿನ ದಿನಗಳಲ್ಲಿ ದಂಪತಿ ನಡುವೆ ಸಣ್ಣ-ಪುಟ್ಟ ವಿಚಾರಗಳಿಗೆ ಗಲಾಟೆ ನಡೆಯುತ್ತದೆ. ವಿಚ್ಛೇದನ ಮತ್ತು ಕೊಲೆ ಹಂತಕ್ಕೆ ತಲುಪುತ್ತವೆ. ಆದರೆ ಇಲ್ಲೊಂದು ಜೋಡಿ ನಡುವೆ ಆಗಿರುವ ಗಲಾಟೆ ಕೇಳಿದ್ರೆ ಶಾಕ್ ಆಗುವುದು ಹೌದು. ಪತಿಯೊಬ್ಬ ಮಾಂಸ ತರಲಿಲ್ಲ ಎಂದು ಜಗಳವಾಡಿದ ಪತ್ನಿಯ ಕತ್ತನ್ನು ಸೀಳಿ ಕೊಲೆ ಮಾಡಿದ್ದಾನೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಗುಡ್ಡೋ (30) ಮೃತ ಮಹಿಳೆ. ಆರೋಪಿಯನ್ನು ಸಗೀರ್ ಎಂದು ಗುರುತಿಸಲಾಗಿದೆ. ಈತ ಮಾಂಸದ ವಿಚಾರವಾಗಿ ನಡೆದ ಜಗಳವಾಡಿ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ.
ಇದನ್ನೂ ಓದಿ:ಪಕ್ಷ ಬಿಡೋಕೆ ನೋವಾಗುತ್ತಿದೆ…ಭಾರದ ಮನಸ್ಸಿನಿಂದ ರಾಜೀನಾಮೆ ಕೊಟ್ಟಿದ್ದೇನೆ; ಎಸ್‌.ಆರ್‌ ಶ್ರೀನಿವಾಸ್‌ನಡೆದಿದ್ದೇನು?:ದಂಪತಿ ಮೂವರು ಮಕ್ಕಳೊಂದಿಗೆ ವಾಸವಾಗಿದ್ದರು. ಇಂದು ಪತಿ ಸಗೀರ್ ಮಾಂಸ ತರಲಿಲ್ಲ ಎಂದು ಇಬ್ಬರ ನಡುವೆ ಜಗಳವಾಗಿದೆ. ಜಗಳ ತಾರಕಕ್ಕೇರಿದ್ದು, ಆಕ್ರೋಶಗೊಂಡ ಸಗೀರ್ ಮಕ್ಕಳ ಎದುರೇ ಚಾಕುವಿನಿಂದ ಪತ್ನಿಯ ಕತ್ತು ಸೀಳಿದ್ದಾನೆ. ಮಕ್ಕಳ ಕಿರುಚಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಜಮಾಯಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಂದೆ ಸಾಗಿರ್ ತಾಯಿಯನ್ನು ಕೊಲೆ ಮಾಡಿರುವ ಘಟನೆಯನ್ನು ಮಕ್ಕಳು ಪೊಲೀಸರಿಗೆ  ಎಳೆಎಳೆಯಾಗಿ ವಿವರಿಸಿದ್ದಾರೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್​​ನತ್ತ ಮುಖ ಮಾಡಿದ ಗುಬ್ಬಿ ಶ್ರೀನಿವಾಸ್‌ಆರೋಪಿಯನ್ನು ಬಂಧಿಸಲಾಗಿದ್ದು, ಅಪರಾಧಕ್ಕೆ ಬಳಸಿದ್ದ ಆಯುಧವನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಸಿಟಿ ಕುಲದೀಪ್ ಗುಣವತ್ ತಿಳಿಸಿದ್ದಾರೆ.
ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ‌ಅರ್ಜಿ ವಜಾ; ಯಾವ ಕ್ಷಣದಲ್ಲಿ ಬೇಕಾದರೂ ಬಂಧನ ಸಾಧ್ಯತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × five =
Remember me
