ಕಾನ್ಪುರ:ಸಾಮಾಜಿಕ ಜಾಲತಾಣದ ಯುಗದಲ್ಲಿ ಯುವ ಪೀಳಿಗೆಯೂ ಒಂದಿಲ್ಲೊಂದು ಕೆಲಸಕ್ಕೆ ಕೈ ಹಾಕಿ ಪೇಚಿಗೆ ಸಿಲುಕುತ್ತಾರೆ. ಪೊಲೀಸರು ಇದಕ್ಕೆ ಸಂಬಂಧಿಸಿದಂತೆ ಕ್ರಮ ಜರುಗಿಸಿದರು ದಿನದಿಂದ ದಿನಕ್ಕೆ ಈ ರೀತಿಯ ಪ್ರಕರಣಗಳು ದಾಖಲಾಗುತ್ತಿರುತ್ತವೆ. ಇದೀಗ ಇದಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದ್ದು, ನೆಟ್ಟಿಗರು ಕಿಡಿಕಾರಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ ಬುಲೆಟ್​ ಬೈಕ್​ನ ಯುವಕನೋರ್ವ ಬೈಕ್​ನ ಹಿಂಬದಿ ಸೀಟ್​ನಲ್ಲಿ ಕುಳಿತುಕೊಂಡು ಯುವಕನೋರ್ವ ಜನನಿಬಿಡ ರಸ್ತೆಯಲ್ಲಿ ಗನ್​ನಿಂದ ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸುತ್ತಾನೆ. ಈತನ ಕೃತ್ಯವನ್ನು ಹಿಂಬದಿ ಬೈಕ್​ನಲ್ಲಿ ಬರುತ್ತಿದ್ದ ಆತನ ಸಹಚರರು ಮೊಬೈಲ್​ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್​ ಮಾಡಿದ್ದಾರೆ.
KANPUR |@kanpurnagarpolHanumant Vihar police station under Uttar Pradesh Police Commissionerate should pay attention, as in this video you can see how a guy is openly firing on a Bullet bike with an illegal pistol, the police administration is silent and the criminals are…pic.twitter.com/LltkJCyR0Y
ಇದನ್ನೂ ಓದಿ: ಸಂತ್ರಸ್ತೆ ಕಿಡ್ನ್ಯಾಪ್​ ಕೇಸ್​; ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್​
ಈ ಕುರಿತು ಪ್ರತಿಕ್ರಿಯಿಸಿರುವ ಕಾನ್ಪುರ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಘಟನೆ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ಕೃತ್ಯ ಎಸಗಿದವರನ್ನು ಪತ್ತೆಹಚ್ಚಲು ವಿಶೇಷ ತಂಡವನ್ನು ರಚಿಸಲಾಗಿದೆ. ವಿಡಿಯೋದಲ್ಲಿ ಕಂಡು ಬಂದಿರುವವರ ಹಿನ್ನೆಲೆ ಏನು ಎಂಬುದು ಪರಿಶೀಲಿಸಲಾಗುತ್ತಿದ್ದು, ಶೀಘ್ರದಲ್ಲೇ ಬಂಧಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕಾನ್ಪುರ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತ ವಿಡಿಯೋ ವೈರಲ್​ ಆಗುತ್ತಿದ್ದಂತೆ ಕಿಡಿಕಾರಿರುವ ನೆಟ್ಟಿಗರು ಈ ಪ್ರಕರಣವು ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ ಎಂದು ವಿಪಕ್ಷ ನಾಯಕರು ಕಿಡಿಕಾರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − nine =
Remember me
