ಲಖನೌ:ದೂರು ಕೊಡೋಕೆ ಅಂತಾ ಸ್ಟೇಷನ್​ಗೆ ಬಂದ ಮಹಿಳೆ ನೋಡಿ ಇನ್​ಸ್ಪೆಕ್ಟರ್​ಗೆ ಅದೇನ್​ ಅನ್ಸುತ್ತೋ…? ಆಕೆ ಎದುರು ಅಸಭ್ಯವಾಗಿ ವರ್ತಿಸೋಕೆ ಶುರು ಮಾಡಿದ್ದಾನೆ. ಇದಕ್ಕೆ ಮಹಿಳೆ ಸರಿಯಾಗಿಯೇ ಬುದ್ಧಿ ಕಲಿಸಿದ್ದಾಳೆ.
ಉತ್ತರಪ್ರದೇಶದ ದೇವರಿಯಾದಲ್ಲಿ ಇನ್​ಸ್ಪೆಕ್ಟರ್​ ವಿರುದ್ಧ ಪ್ರಕರಣ ದಾಖಲಾಗಿದೆ. ಆತನನ್ನು ಈಗ ಅಮಾನತು ಮಾಡಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಇದನ್ನೂ ಓದಿ;ದೇಗುಲವನ್ನು ಮಸೀದಿಯಾಗಿಸಿದ ತಬ್ಲಿಘಿಗಳು; ಪಾಕ್​ನಲ್ಲಿ 102 ಹಿಂದುಗಳ ಬಲವಂತದ ಮತಾಂತರ
ಭಾಟ್ನಿ ಠಾಣೆಯ ಠಾಣಾಧಿಕಾರಿಯಾಗಿದ್ದ ಭೀಷ್ಮ ಪಾಲ್​ ಸಿಂಗ್​ ದೂರು ನೀಡಲು ಬಂದ ಮಹಿಳೆ ಎದುರಲ್ಲೇ ಹಸ್ತ ಮೈಥುನ ನಡೆಸಿದ್ದಾನೆ. ದೂರಿನ ವಿಚಾರಣೆಗೆ ಬಂದಾಗಲೆಲ್ಲ ಈ ಕೃತ್ಯ ಮುಂದುವರಿದಿದೆ. ಇದರಿಂದ ಬೇಸತ್ತ ಮಹಿಳೆ ಆತನಿಗೆ ಬುದ್ಧ ಕಲಿಸಲು ನಿರ್ಧರಿಸಿದ್ದಾಳೆ. ಆತನ ಕೃತ್ಯವನ್ನು ಮೊಬೈಲ್​ನಲ್ಲಿ ಚಿತ್ರೀಕರಿಸಿದ್ದಾಳೆ. ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾಳೆ. ಇದು ವೈರಲ್​ ಆಗುತ್ತಿದ್ದಂತೆ ಆತನ ಉದ್ಯೋಗಕ್ಕೆ ಕುತ್ತು ತಂದಿದೆ.
ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸೇವೆಯಿಂದ ಅಮಾನತುಗೊಳಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ದೇವರಿಯಾ ಪೊಲೀಸ್​ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ;ಟಿಬೆಟ್​ನಂತೆ ಹಾಂಗ್​ಕಾಂಗನ್ನು ಹೊಸಕಿದ ಚೀನಾ; ಭದ್ರತಾ ಕಾಯ್ದೆ ಅಂಗೀಕಾರ; ಪ್ರಜಾಪ್ರಭುತ್ವ ಹೋರಾಟಕ್ಕೆ ಹಿನ್ನಡೆ
ಭೂವಿವಾದಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಲು ಪದೇಪದೆ ಠಾಣೆಗೆ ಅಲೆದಾಡಿಸುತ್ತಿದ್ದ ಇನ್​ಸ್ಪೆಕ್ಟರ್​ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ. ಇತರ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು ತಿಳಿದ ಬಳಿಕ ಆತನಿಗೆ ಬುದ್ಧಿ ಕಲಿಸಲೆಂದೇ ಚಿತ್ರೀಕರಿಸಿದ್ದಾಗಿ ಹೇಳಿದ್ದಾಳೆ.
ಕರೊನಾ ಲಸಿಕೆ ಮೊದಲಿಗೆ ಸಿಗೋದು ಯಾರಿಗೆ? ಪ್ರಧಾನಿ ಮೋದಿಯೇ ಸಿದ್ಧಪಡಿಸಿದ್ದಾರೆ ವಿತರಣಾ ಯೋಜನೆ ರೂಪುರೇಷೆ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
