ಲಖನೌ:ಸಾಮಾಜಿಕ ಜಾಲತಾಣ ಮೇನಿಯಾಗೆ ಮಾರು ಹೋಗಿರುವ ಬಹುತೇಕರು ಫಾಲೋವರ್ಸ್​, ಲೈಕ್ಸ್​ ಮತ್ತು ಶೇರ್​ ಮೂಲಕ ತಮ್ಮ ಖ್ಯಾತಿಯನ್ನು ಹೆಚ್ಚಿಸಿಕೊಳ್ಳಲು ಹವಣಿಸುತ್ತಿರುತ್ತಾರೆ. ಇದಕ್ಕೆ ಉತ್ತರ ಪ್ರದೇಶದ ಅಮ್ರೋಹ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕಿಯರು ಸಹ ಹೊರತಾಗಿಲ್ಲ. ಇನ್​ಸ್ಟಾಗ್ರಾಂನಲ್ಲಿ ತಮ್ಮ ಪೋಸ್ಟ್​ಗಳಿಗೆ ಲೈಕ್​ ಮತ್ತು ಶೇರ್​ ಮಾಡುವುದರ ಜೊತೆಗೆ ಖಾತೆಯನ್ನು ಫಾಲೋ ಮಾಡುವಂತೆ ವಿದ್ಯಾರ್ಥಿಗಳನ್ನು ಬಲವಂತ ಮಾಡುತ್ತಿರುವ ಆರೋಪ ಕೇಳಿಬಂದಿದೆ.
ಇನ್‌ಸ್ಟಾಗ್ರಾಂ ರೀಲ್ಸ್ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಶಿಕ್ಷಕಿಯರಲ್ಲಿ ಓರ್ವ ಶಿಕ್ಷಕಿ, ಪ್ರತಿದಿನ ಶಾಲೆಯಲ್ಲೇ ರೀಲ್ಸ್​ ಮಾಡುತ್ತಾರೆ ಮತ್ತು ಮತ್ತೊರ್ವ ಶಿಕ್ಷಕಿ ಅದನ್ನು ಶೂಟಿಂಗ್​ ಮಾಡುತ್ತಾರೆ. ರವಿಪೂಜಾ ಹೆಸರಿನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋವನ್ನು ಪೋಸ್ಟ್​ ಮಾಡಲಾಗುತ್ತದೆ. ಶಾಲೆಯಲ್ಲಿ ಕರ್ತವ್ಯದಲ್ಲಿ ಇರುವಾಗಲೇ ವಿಡಿಯೋ ಶೂಟ್​ ಮಾಡುತ್ತಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.
ಇನ್‌ಸ್ಟಾಗ್ರಾಂ ಖಾತೆಯನ್ನು ಲೈಕ್, ಶೇರ್ ಮತ್ತು ಸಬ್​ಸ್ಕ್ರೈಬ್ ಮಾಡಲು ವಿದ್ಯಾರ್ಥಿಗಳನ್ನು ಒತ್ತಾಯಿಸಿರುವ ಆರೋಪ ಕೇಳಿಬಂದಿದ್ದ, ವಿದ್ಯಾರ್ಥಿಗಳ ಪಾಲಕರು ಈ ವಿಚಾರ ಗೊತ್ತಾಗುತ್ತಿದ್ದಂತೆ ಶಿಕ್ಷಕಿಯರ ವಿರುದ್ಧ ಕ್ರಮ ಜರುಗಿಸುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಅನ್ನು ಸಂಪರ್ಕಿಸಿದ್ದಾರೆ. ಈ ಪ್ರಕರಣದ ಬಗ್ಗೆ ವಲಯ ಶಿಕ್ಷಣಾಧಿಕಾರಿ ಗಂಗೇಶ್ವರಿ ಆರತಿ ಗುಪ್ತಾ ತನಿಖೆ ನಡೆಸುತ್ತಿದ್ದಾರೆ.
ಶಿಕ್ಷಕರು ಶಾಲೆಯಲ್ಲಿ ರೀಲ್‌ಗಳನ್ನು ರೆಕಾರ್ಡ್ ಮಾಡುತ್ತಾರೆ ಮತ್ತು ಅವುಗಳನ್ನು ಲೈಕ್ ಮಾಡಲು ಮತ್ತು ಹಂಚಿಕೊಳ್ಳಲು ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುತ್ತಾರೆ. ಹಾಗೆ ಮಾಡದಿದ್ದರೆ ನಮ್ಮನ್ನು ಹೊಡೆಯುವುದಾಗಿ ಬೆದರಿಕೆ ಹಾಕುತ್ತಾರೆ ಎಂದು ಅಣ್ಣು ಎಂಬ ವಿದ್ಯಾರ್ಥಿನಿ ಹೇಳಿದ್ದಾಳೆ.
ಇದನ್ನೂ ಓದಿ:VIDEO| ಶಿವನ ದೇವಾಲಯಕ್ಕೆ ನುಗ್ಗಿ ಭಕ್ತರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಮುಸ್ಲಿಂ ಯುವಕ
ಶಿಕ್ಷಕಿಯೊಬ್ಬರು ತನಗೆ ಅಡುಗೆ ಮತ್ತು ಚಹಾ ಮಾಡಲು ವಿದ್ಯಾರ್ಥಿಗಳನ್ನು ಒತ್ತಾಯಿಸುತ್ತಾರೆ ಎಂದು ಮತ್ತೊಬ್ಬ ವಿದ್ಯಾರ್ಥಿನಿ ಮನಿಶಾ ಆರೋಪಿಸಿದ್ದಾರೆ. ಶಾಲೆಯಲ್ಲಿ ಸಮರ್ಪಕ ಶಿಕ್ಷಣ ದೊರೆಯುತ್ತಿಲ್ಲ ಎಂದು ಹಲವಾರು ವಿದ್ಯಾರ್ಥಿಗಳು ದೂರಿದರು.
ಸಾಮಾಜಿಕ ಜಾಲತಾಣಕ್ಕಾಗಿ ಶಾಲೆಯಲ್ಲಿ ವಿಡಿಯೋಗಳನ್ನು ರೆಕಾರ್ಡ್ ಮಾಡುತ್ತಿರುವ ಶಿಕ್ಷಕಿಯರನ್ನು ಅಂಬಿಕಾ ಗೋಯಲ್, ಪೂನಂ ಸಿಂಗ ಮತ್ತು ನೀತು ಕಶ್ಯಪ್ ಎಂದು ಗುರುತಿಸಲಾಗಿದೆ. ಅಲ್ಲದೆ, ತಮ್ಮ ಮೇಲಿನ ಆರೋಪವನ್ನು ನಿರಾಕರಿಸಿದ್ದಾರೆ ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲು ತಮ್ಮನ್ನು ತಾವು ಅರ್ಪಿಸಿಕೊಂಡಿರುವುದಾಗಿ ಹೇಳಿದ್ದಾರೆ.
ಮಕ್ಕಳ ಆರೋಪದ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಶಾಲಾ ಸಮಯದಲ್ಲಿ ಮಕ್ಕಳಿಗೆ ಶ್ರದ್ಧೆಯಿಂದ ಪಾಠ ಮಾಡುತ್ತೇವೆ. ಕೆಲವೊಮ್ಮೆ ಮಕ್ಕಳ ಕಲಿಕೆಗಾಗಿ ವಿಡಿಯೋ ತಯಾರಿಸುತ್ತೇವೆ ಎಂದು ಶಿಕ್ಷಕಿಯರಾದ ಅಂಬಿಕಾ ಹೇಳಿದರು.
ಸಾಮಾಜಿಕ ಜಾಲತಾಣದಲ್ಲಿ ಶಾಲಾ ಶಿಕ್ಷಕಿಯರ ಕೆಲವು ವೈರಲ್ ರೀಲ್‌ಗಳ ಬಗ್ಗೆ ನನಗೆ ಮಾಹಿತಿ ನೀಡಲಾಗಿದೆ. ಈ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಗಂಗೇಶ್ವರಿ ಆರತಿ ಗುಪ್ತಾ ಅವರು ಹೇಳಿದ್ದಾರೆ.(ಏಜೆನ್ಸೀಸ್​)
ಅಂಬಾನಿ ಸ್ಕೂಲ್​ನಲ್ಲಿ ಓದುತ್ತಿರುವ ಐಶ್ವರ್ಯಾ ರೈ ಮಗಳ ಶಾಲಾ ಶುಲ್ಕದ ಬಗ್ಗೆ ಕೇಳಿದ್ರೆ ಬೆರಗಾಗ್ತೀರಾ!

VIDEO| ಶಿವನ ದೇವಾಲಯಕ್ಕೆ ನುಗ್ಗಿ ಭಕ್ತರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಮುಸ್ಲಿಂ ಯುವಕ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × two =
Remember me
