ಕಾನ್ಪುರ:ವಾಹನ ಚಾಲನೆ ಮಾಡುವ ವೇಳೆ ಮೊಬೈಲ್ ಸ್ಫೋಟಗೊಂಡ ಪರಿಣಾಮ ರಸ್ತೆ ಅಪಘಾತವಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಮೃತರನ್ನು ಪೂಜಾ (28) ಎಂದು ಗುರುತಿಸಲಾಗಿದ್ದು, ಇವರು ಉತ್ತರಪ್ರದೇಶದ ಫರೂಕಾಬಾದ್ ಜಿಲ್ಲೆಯ ನೆಹರಾರಿಯಾ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ರಾಜ್ಯದ 11ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್​ ಘೋಷಣೆ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಪೂಜಾ ಅವರು ಕೆಲಸದ ನಿಮಿತ್ತ ಮುಂಬೈಗೆ ತೆರಳಬೇಕಿದ್ದ ಕಾರಣ ಅವರು ವೇಗವಾಗಿ ಗಾಡಿಯನ್ನು ಚಲಾಯಿಸಿಕೊಂಡು ರೈಲ್ವೆ ಸ್ಟೇಷನ್​ನತ್ತ ತರಳುತ್ತಿದ್ದರು. ವಾಹನ ಚಲಾಯಿಸುವಾಗ ಅವರು ಹೆಲ್ಮೆಟ್​ ಧರಿಸಿರಲಿಲ್ಲ ಎಂದು ತಿಳಿದು ಬಂದಿದೆ. ಈ ವೇಳೆ ಮೊಬೈಲ್​ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿ ಸ್ಕೂಟರ್ ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಜಾಗರೂಕ ಚಾಲನೆಯಿಂದಾಗಿ ದುರ್ಘಟನೆ ಸಂಭವಿಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + seventeen =
Remember me
