ಬಾರಾಬಂಕಿ:ವೃದ್ಧೆಯೊಬ್ಬಳು ತನ್ನ ಮೊಮ್ಮಗನ ಮೃತದೇಹದೊಂದಿಗೆ 10 ದಿನಗಳ ಕಾಲ ವಾಸಿಸುತ್ತಿದ್ದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ.ಮೊಮ್ಮಗನನ್ನು ಪ್ರಿಯಾಂಶು(17) ಎಂದು ಗುರುತಿಸಲಾಗಿದ್ದು, ತಂದೆ-ತಾಯಿಯನ್ನು ಕಳೆದುಕೊಂಡು ಅಜ್ಜಿಯೊಂದಿಗೆ ವಾಸಿಸುತ್ತಿದ್ದ. ಕಳೆದ ಎರಡು ದಿನಗಳಿಂದ ಮನೆಯಿಂದ ದುರ್ವಾಸನೆ ಬರುತ್ತಿತ್ತು. ಅಕ್ಕಪಕ್ಕದವರು ದುರ್ವಾಸನೆ ಬೀರುತ್ತಿರುವುದನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ:ಅಧಿಕ ಪಿಂಚಣಿಗೆ ಅರ್ಜಿ ಸಲ್ಲಿಸಲು ಗಡುವು ವಿಸ್ತರಣೆ; ಇದು ಕೊನೆಯ ಅವಕಾಶ ಎಂದ EPFOಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು. ವೃದ್ಧೆಯ ಮನೆ ಪರಿಶೀಲನೆ ನಡೆಸಿದಾಗ ಬಾಲಕನ ಕೊಳೆತ ಶವವನ್ನು ಪತ್ತೆಯಾಗಿದೆ. ಕೂಡಲೇ ಪೊಲೀಸರು ಮೃತದೇಹವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.ವೃದ್ಧೆಯ ಪತಿ ಸರ್ಕಾರಿ ನೌಕರನಾಗಿದ್ದು, ಕೆಲ ವರ್ಷಗಳ ಹಿಂದೆ ಆತ ಮೃತಪಟ್ಟಿದ್ದ. ಆತನ ಪಿಂಚಣಿಯಿಂದ ಬರುತ್ತಿದ್ದ ಹಣ ಆಕೆ ಹಾಗೂ ಮೊಮ್ಮಗನ ಜೀವನಕ್ಕೆ ಆಧಾರವಾಗಿತ್ತು. ವೃದ್ಧೆಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಹಿರಿಯ ಮಗಳು ಮತ್ತು ಆಕೆಯ ಪತಿ ಆರು ವರ್ಷಗಳ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಇವರ ಮಗನೇ ಪ್ರಿಯಾಂಶು, ಈತ ಕಳೆದ ಕೆಲವು ವರ್ಷಗಳಿಂದ ಅಜ್ಜಿಯೊಂದಿಗೆ ವಾಸಿಸುತ್ತಿದ್ದ. . ಇನ್ನು, ಕಿರಿಯ ಮಗಳು ಲಖೀಂಪುರ ಖೇರಿಯಲ್ಲಿ ವಾಸಿಸುತ್ತಿದ್ದು, ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇದನ್ನೂ ಓದಿ:ದೇವಸ್ಥಾನದ ಅರ್ಚಕರ ನೇಮಕಾತಿಯಲ್ಲಿ ಜಾತಿಯ ಪಾತ್ರವಿಲ್ಲ: ಮದ್ರಾಸ್ ಹೈಕೋರ್ಟ್ಘಟನೆ ಕುರಿತು ಮಾತನಾಡಿದ ಪೊಲೀಸರು, ಮಹಿಳೆ ಮಾನಸಿಕವಾಗಿ ಅಸ್ವಸ್ಥಳಾಗಿದ್ದು, ಆಕೆ ಪ್ರತಿದಿನ ತನ್ನ ಮೊಮ್ಮಗನ ದೇಹವನ್ನು ತೊಳೆದು ಅವನ ಮೃತದೇಹದ ಬಟ್ಟೆಗಳನ್ನು ಬದಲಾಯಿಸುತ್ತಿದ್ದಳು. ಆತನ ಸಾವಿನ ಬಗ್ಗೆ ಕೇಳಿದಾಗ, ಹತ್ತು ದಿನಗಳ ಹಿಂದೆ ಪ್ರಿಯಾಂಶು ನಿಧನವಾದ ಎಂದು ವೃದ್ಧೆ ಹೇಳಿದ್ದಾಳೆ ಎಂದು ತಿಳಿಸಿದರು.(ಏಜೆನ್ಸೀಸ್​​)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:20 + 16 =
Remember me
