ಲಕ್ನೋ:ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕರೊನಾ ಲಸಿಕೆ ಪಡೆಯಬೇಕಾಗಿದ್ದ ಮೂವರು ಮಹಿಳೆಯರು ಹುಚ್ಚುನಾಯಿ ಕಡಿತಕ್ಕೆ ನೀಡುವ ರೇಬಿಸ್ ಚುಚ್ಚುಮದ್ದನ್ನು ಪಡೆದು ಫಜೀತಿ ಅನುಭವಿಸಿದ ಘಟನೆ ಉತ್ತರಪ್ರದೇಶದ ಶಾಮಿಲಿ ಜಿಲ್ಲೆಯಲ್ಲಿ ಗುರುವಾರ ನಡೆದಿದೆ.
ಸರೋಜಾ (70), ಅನಾರ್ಕಲಿ (72) ಮತ್ತು ಸತ್ಯವತಿ (60) ಎನ್ನುವ ಮಹಿಳೆಯರು ರೇಬಿಸ್ ಚುಚ್ಚುಮದ್ದನ್ನು ಪಡೆದವರಾಗಿದ್ದಾರೆ.
ಕರೊನಾ ಲಸಿಕೆ ಹಾಕಿಸಿಕೊಳ್ಳಲು ಆಸ್ಪತ್ರೆಗೆ ತೆರಳಿದ್ದ ಈ ಮೂವರು ಮಹಿಳೆಯರು ಎರಡನೇ ಮಹಡಿ ಬದಲು ಒಂದನೇ ಮಹಡಿಗೆ ತೆರಳಿದ್ದಾರೆ. ಅಲ್ಲಿದ್ದ ಸಿಬ್ಬಂದಿಯೊಬ್ಬ ಅಪಾರ್ಥ ಮಾಡಿಕೊಂಡು ಈ ಮಹಿಳೆಯರಿಗೆ ರೇಬಿಸ್ ಲಸಿಕೆ ನೀಡಿದ್ದಾನೆ. ಮನೆಗೆ ಹೋದ ನಂತರ ಮೂವರೂ ಮಹಿಳೆಯರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದ ವಾಪಸ್ ಆಸ್ಪತ್ರೆಗೆ ಬಂದು ವಿಚಾರಿಸಿದಾಗ ತಾವು ರೇಬಿಸ್ ಲಸಿಕೆ ತೆಗೆದುಕೊಂಡಿರುವುದು ಆ ಮಹಿಳೆಯರಿಗೆ ಗೊತ್ತಾಗಿದೆ.
ಈ ಕುರಿತು ಶಾಮಿಲಿ ಜಿಲ್ಲಾ ವೈದ್ಯಾಧಿಕಾರಿ ತಪ್ಪು ಲಸಿಕೆ ನೀಡಿದ ಆಸ್ಪತ್ರೆಯ ಔಷಧಾಲಯ ಸಿಬ್ಬಂದಿಯನ್ನು ಕೆಲಸದಿಂದ ಅಮಾನತು ಮಾಡಿದ್ದಾರೆ. ಸದ್ಯ ರೇಬಿಸ್ ಲಸಿಕೆ ತೆಗೆದುಕೊಂಡ ಮಹಿಳೆಯರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಹುಲ್​ ದ್ರಾವಿಡ್​ಗೆ ಕೋಪ ಉಕ್ಕೇರಿದಾಗ ಬಂತು ಕನ್ನಡದ ನುಡಿ… ‘ಒಡೆದ್​ಹಾಕ್​​ ​​ಬಿಡ್ತೀನಿ….’

ಬ್ರಿಟನ್ ಪ್ರಿನ್ಸ್ ಫಿಲಿಪ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
