ನವದೆಹಲಿ:ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್​ಸಿ)ದ ಅಧ್ಯಕ್ಷ ಮನೋಜ್ ಸೋನಿ ಶನಿವಾರ(ಜು.20)ರಾಜೀನಾಮೆ ನೀಡಿದ್ದಾರೆ. ಅವರ ಅಧಿಕಾರಾವಧಿ 2029ಕ್ಕೆ ಕೊನೆಗೊಳ್ಳಬೇಕಿತ್ತಾದರೂ, ರಾಜೀನಾಮೆ ನೀಡಿರುವುದು ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ.
ಇದನ್ನೂ ಓದಿ:ಪ್ರಿಯಾಂಕಾ ಚೋಪ್ರಾ ಸುಂದರವಾಗಿಲ್ಲ ಎಂದಿದ್ದರು: ನಟಿಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಹಿರಿಯ ನಿರ್ದೇಶಕ!
ಅವರ ಅಧಿಕಾರಾವಧಿ ಇನ್ನೂ ಐದು ವರ್ಷ ಬಾಕಿ ಇರುವಾಗಲೇ ರಾಜೀನಾಮೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಮನೋಜ್ ಸೋನಿ ರಾಜೀನಾಮೆಗೂ, ಪ್ರೊಭೇಷನರಿ ಐಎಎಸ್​ ಪೂಜಾ ಖೇಡ್ಕರ್ ವಿವಾದಕ್ಕೂ ಸಂಬಂಧವಿದೆಯೇ ಎಂಬುದರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಎತ್ತುತ್ತಿದ್ದಾರೆ. ಹಣ ಮತ್ತು ರಾಜಕೀಯ ಪ್ರಭಾವ ಇದ್ದರೆ ಯೂ ಪಿ ಎಸ್​ ಸಿ ಯಲ್ಲಿ ಒಳ್ಳೇ ರಾಂಕಿಂಗ್ ಸಿಗುತ್ತೆ ಎಂಬ ಮಾತುಗಳು ಕೇಳಿ ಬರುತ್ತಿರುವ ಸಮಯದಲ್ಲಿಯೇ ಸೋನಿಯವರು ರಾಜೀನಾಮೆ ನೀಡಿರುವುದರ ಹಿಂದೆ ಬಲವಾದ ಕಾರಣಗಳಿವೆ ಎನ್ನಲಾಗುತ್ತಿದೆ.
ಮಾಹಿತಿ ಪ್ರಕಾರ ಮನೋಜ್ ಸೋನಿ ರಾಷ್ಟ್ರಪತಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಸೋನಿ 2017ರಲ್ಲಿ ಆಯೋಗದ ಸದಸ್ಯರಾಗಿ ಸೇರಿದ್ದರು. ಮೇ 16, 2023ರಂದು ಅವರನ್ನು ಯುಪಿಎಸ್​ಸಿ ಅಧ್ಯಕ್ಷರನ್ನಾಗಿ ಮಾಡಲಾಯಿತು. ಅವರು ಒಂದು ತಿಂಗಳ ಹಿಂದೆ ರಾಜೀನಾಮೆ ನೀಡಿದ್ದರು. ಆದರೆ, ಅವರು ರಿಲೀವ್ ಆಗುತ್ತಾರೋ ಇಲ್ಲವೋ ಎಂಬುದು ಸ್ಪಷ್ಟವಾಗಿರಲಿಲ್ಲ. ನೂತನ ಅಧ್ಯಕ್ಷರ ಹೆಸರನ್ನು ಸರ್ಕಾರ ಪ್ರಕಟಿಸಿಲ್ಲ.
ಎನ್​ಟಿಎ ವೆಬ್‌ಸೈಟ್‌ನಲ್ಲಿ ನೀಟ್​-ಯುಜಿ ಫಲಿತಾಂಶ.. ಆನ್​ಲೈನ್​ನಲ್ಲಿ ಹೀಗೆ ಪರಿಶೀಲಿಸಬಹುದು..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 + 2 =
Remember me
