ದೆಹಲಿ:ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ 2023ರ ಸಿವಿಲ್ ಸರ್ವೀಸಸ್ ಪ್ರಿಲಿಮಿನರಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ಪರೀಕ್ಷಿಸಬಹುದಾಗಿದೆ.
ಇದನ್ನೂ ಓದಿ: ಪ್ರವಾಸಕ್ಕೆಂದು ಬಂದಿದ್ದ ವಿದೇಶಿ ಪ್ರಜೆಗೆ ಚಿಕ್ಕಪೇಟೆಯಲ್ಲಿ ಕಿರುಕುಳ ಕೊಟ್ಟ ನವಾಬ್!
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಮೇ 28ರಂದು ಸಿವಿಲ್ ಸರ್ವಿಸಸ್ ಪ್ರಿಲಿಮಿನರಿ ಪರೀಕ್ಷೆಯನ್ನು(CSE) ಯಶಸ್ವಿಯಾಗಿ ನಡೆಸಿತ್ತು. ಸದ್ಯ, ಆಯೋಗವು ಈ ಪರೀಕ್ಷೆಯ ಫಲಿತಾಂಶವನ್ನು ತನ್ನ ವೆಬ್​ಸೈಟ್​ನಲ್ಲಿ ಇಂದು ಪ್ರಕಟಿಸಿದೆ.
ಯುಪಿಎಸ್​ಸಿ ಪ್ರಿಲಿಮ್ಸ್ ಪರೀಕ್ಷೆಯ ಫಲಿತಾಂಶ ಹೀಗೆ ಪರಿಶೀಲಿಸಿ:ಅಭ್ಯರ್ಥಿಗಳು ಯುಪಿಎಸ್​ಸಿಯ ಅಧಿಕೃತ ವೆಬ್​ಸೈಟ್​ https://www.upsc.gov.in/ ಗೆ ಭೇಟಿ ನೀಡಿ. ಮುಖಪುಟದಲ್ಲಿ ಫಲಿತಾಂಶಗಳು ಅಥವಾ ಪರೀಕ್ಷೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ಯುಪಿಎಸ್​ಸಿ ವಿವಿಧ ಪರೀಕ್ಷೆಗಳನ್ನು ನಡೆಸುತ್ತದೆ ಹಾಗಾಗಿ ನೀವು ಬರೆದ ಪರೀಕ್ಷೆಯ ಫಲಿತಾಂಶದ ಲಿಂಕ್​ ಮೇಲೆ ಕ್ಲಿಕ್​ ಮಾಡಿ ಫಲಿತಾಂಶವನ್ನು ಪರೀಕ್ಷಿಸಬಹುದಾಗಿದೆ.
ಪರೀಕ್ಷಾ ಫಲಿತಾಂಶದ ಕುರಿತು ಯಾವುದೇ ಪ್ರಶ್ನೆಗಳನ್ನು ಪರಿಹರಿಸಲು ಅಥವಾ ಸ್ಪಷ್ಟಿಕರಣವನ್ನು ಪಡೆಯಲು, ಹೊಸ ದೆಹಲಿಯ ಷಹಜಹಾನ್ ರಸ್ತೆಯಲ್ಲಿರುವ ಕೇಂದ್ರ ಲೋಕಸೇವಾ ಆಯೋಗದ ಆವರಣದಲ್ಲಿ ಫೆಸಿಲಿಟೇಶನ್ ಕೌಂಟರ್​​ನ್ನು ಸ್ಥಾಪಿಸಿದೆ. ಅಭ್ಯರ್ಥಿಗಳು ಕೌಂಟರ್‌ಗೆ ಖುದ್ದಾಗಿ ಭೇಟಿ ನೀಡಬಹುದು ಅಥವಾ ಯುಪಿಎಸ್​ಸಿಯ ವೆಬ್​ಸೈಟ್​ನಲ್ಲಿರುವ ದೂರವಾಣಿ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
