ನಾಗ್ಪುರ:ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರ ನಾಗ್ಪುರದ ನಿವಾಸದಲ್ಲಿ ಬಾಂಬ್​ ಇಟ್ಟಿರುವುದಾಗಿ ಹೇಳಿ ಕರೆ ಮಾಡಿದ್ದ ಆರೋಪಿಯನ್ನು ಬಂಧಿಸಿರುವುದಾಗಿ ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ನಾಗ್ಪುರದಿಂದ 30 ಕಿಲೋಮೀಟರ್​ ದೂರದಲ್ಲಿರುವ ಕನ್ಹಾನ್​ ಪಟ್ಟಣ್ಣದಲ್ಲಿ 30 ವರ್ಷದ ವ್ಯಕ್ತಿ ಓರ್ವನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಆಯುಕ್ತ ಅಮಿತೇಶ್​ ಕುಮಾರ್​ ತಿಳಿಸಿದ್ದಾರೆ.
ತಾನು ವಾಸವಿರುವ ಗ್ರಾಮದಲ್ಲಿ ವಿದ್ಯುತ್​ ಕಡಿತಗೊಳಿಸಿದ್ದಕ್ಕೆ ಕೋಪಗೊಂಡ ಯುವಕ ದೇವೇಂದ್ರ ಫಡ್ನವೀಸ್​​ ಮನೆಯಲ್ಲಿ ಬಾಂಬ್​ ಇಟ್ಟಿರುವುದಾಗಿ ಕರೆ ಮಾಡಿದಾಗಿ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
We received a call threatening to place a bomb in front of the house of Deputy CM Devendra Fadnavis in Nagpur, but the investigation has revealed that this is a fake call. The person who had called last night has been taken into custody and is under interrogation: Amitesh Kumar,…pic.twitter.com/V3zif0Rhee
ಇದನ್ನೂ ಓದಿ:ಆಸ್ಟ್ರೇಲಿಯನ್ನರು ದ್ವೇಷಿಸುವ ಬ್ಯಾಟ್ಸ್​​ಮನ್​ ಚೇತೇಶ್ವರ್​​ ಪೂಜಾರ! ಕಾರಣ ಬಿಚ್ಚಿಟ್ಟ ಆಸ್ಟ್ರೇಲಿಯಾ ವೇಗಿ
ತಡರಾತ್ರಿ 2 ಘಂಟೆ ಸುಮಾರಿಗೆ ನಾಗ್ಪುರ ಪೊಲೀಸ್​ ಕಂಟ್ರೋಲ್​ ರೂಮಿಗೆ ಕರೆ ಮಾಡಿದ ಆರೋಪಿಯೂ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ಅವರ ಮನೆಯಲ್ಲಿ ಬಾಂಬ್​ ಇಟ್ಟಿರುವುದಾಗಿ ಹೇಳಿ ಕರೆಯನ್ನ ಸ್ಥಗಿತಗೊಳಿಸಿದ್ದಾನೆ.
ಕೂಡಲೇ ಸ್ಥಳಕ್ಕೆ ದೌಡಅಯಿಸಿದ ಬಾಂಬ್​ ನಿಷ್ಕ್ರಿಯ ತಂಡ ಮತ್ತು ಶ್ವಾನ ದಳ ತಪಾಸಣೆ ನಡೆಸಿದಾಗ ಸ್ಥಳದಲ್ಲಿ ಯಾವುದೇ ಸ್ಪೋಟಕಗಳು ಕಂಡು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 5 =
Remember me
