ಬಾರಾಬಂಕಿ:ಉತ್ತರಪ್ರದೇಶದಲ್ಲಿ ಮದುವೆಯೊಂದು ದುರಂತ ಅಂತ್ಯ ಕಂಡಿದೆ. ಉಡುಗೊರೆಗಾಗಿ ನಡೆದ ಘರ್ಷಣೆಯಲ್ಲಿ ಕೊಲೆಗೆ ಕಾರಣವಾಗಿದೆ. ತನ್ನ ತಂಗಿಗೆ ಅಣ್ಣ ಚಿನ್ನದ ಉಡುಗೊರೆಯನ್ನು ನೀಡಲು ಮುಂದಾಗಿದ್ದಕ್ಕೆ ಹೆಂಡತಿ ಕುಟುಂಬದವೇ ಅಳಿಯನನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಕಾಂಗ್ರೆಸ್​ನಿಂದ ಒಬಿಸಿ ಮೀಸಲಾತಿ ಮುಸ್ಲಿಮರ ಪಾಲು: ಮೋದಿಗೆ ಸಿದ್ದರಾಮಯ್ಯ ತಿರುಗೇಟು
ಉತ್ತರಪ್ರದೇಶದ ಬಾರಾಬಂಕಿ ಸಮೀಪದ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಚಂದ್ರಪ್ರಕಾಶ್ ಮಿಶ್ರಾ ಎಂಬಾಂತ ತನ್ನ ಸಹೋದರಿಯ ಮದುವೆಗೆ ಚಿನ್ನದ ಉಂಗುರ ಮತ್ತು ಟಿವಿಯನ್ನು ಉಡುಗೊರೆಯಾಗಿ ನೀಡಿದ್ದಕ್ಕಾಗಿ ಮನನೊಂದ ಪತ್ನಿಯ ಮನೆಯವರು ಚಂದ್ರಪ್ರಕಾಶ್​ ಮಿತ್ರಾನನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಏಪ್ರಿಲ್‌ 26ರಂದು ಚಂದ್ರಪ್ರಕಾಶ್‌ ಮಿಶ್ರಾ ಅವರ 35 ವರ್ಷ ವಯಸ್ಸಿನ ಸಹೋದರಿಯ ಮದುವೆ ನಿಗದಿಯಾಗಿತ್ತು. ತಂಗಿಯ ಮದುವೆಗೆ ಚಿನ್ನದ ಉಂಗುರ ಹಾಗೂ ಟಿವಿಯನ್ನು ಉಡುಗೊರೆಯಾಗಿ ನೀಡಲು ತೀರ್ಮಾನಿಸಿದ್ದ ಎನ್ನಲಾಗಿದೆ. ಆದರೆ ಇದಕ್ಕೆ ಆಕ್ರೋಶಗೊಂಡ ಪತ್ನಿ ಅಸಮಾಧಾನ ವ್ಯಕ್ತಪಡಿಸಿದ್ದಾಳೆ. ಇಷ್ಟಕ್ಕೆ ಸುಮ್ಮನಾಗದ ಇಬ್ಬರ ನಡುವೆ ತೀವ್ರ ಘರ್ಷಣೆಗೆ ಕಾರಣವಾಗಿದೆ. ಜಗಳ ಮುಂದುವರೆದು ಛಾಬಿ ತನ್ನ ಪತಿಗೆ ಪಾಠ ಕಲಿಸಲು ತನ್ನ ಸಹೋದರರನ್ನು ಕರೆಸಿದ್ದಾಳೆ.
ಚಾಬಿಯ ಸಹೋದರರು 35 ವರ್ಷದ ಚಂದ್ರಪ್ರಕಾಶ್‌ನನ್ನು ಸುಮಾರು ಒಂದು ಗಂಟೆ ಕಾಲ ದೊಣ್ಣೆಯಿಂದ ಥಳಿಸಿದ್ದರು. ತೀವ್ರ ಗಾಯಗೊಂಡಿದ್ದ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಚಂದ್ರಪ್ರಕಾಶ್‌ ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಛಾಬಿ ಮತ್ತು ಆಕೆಯ ಸಹೋದರರು ಸೇರಿದಂತೆ ಐವರನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಾಬಿಯ ಸಹೋದರರು ಆತನ ಬಾವನಾದ ಚಂದ್ರಪ್ರಕಾಶ್​ನನ್ನು ಸುಮಾರು ಒಂದು ಗಂಟೆಗಳ ಕಾಲ ದೊಣ್ಣೆಗಳಿಂದ ಹಲ್ಲೆ ಮಾಡಿದ್ದಾರೆ. ತೀವ್ರ ಗಾಯಗೊಂಡಿದ್ದ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಚಾಬಿ ಮತ್ತು ಆಕೆಯ ಸಹೋದರರು ಸೇರಿದಂತೆ ಐವರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಎಫ್‌ಐಆರ್ ದಾಖಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 10 =
Remember me
