ನವದೆಹಲಿ:ಭಾರತದ ವಿಕೆಟ್ ಕೀಪರ್ ಹಾಗೂ ಬ್ಯಾಟ್ಸ್‌ಮನ್ ರಿಷಬ್ ಪಂತ್, ದೆಹಲಿಯಿಂದ ರೂರ್ಕಿಗೆ ಹೋಗುವ ಮಾರ್ಗದಲ್ಲಿ ಹಮ್ಮದ್‌ಪುರ ಝಾಲ್‌ಗೆ ಸಮೀಪವಿರುವ ನರ್ಸನ್ ಗಡಿಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಸಂದರ್ಭ ಅವರ ಮಾಜಿ ಪ್ರೇಯಸಿ ಊರ್ವರ್ಶಿ ರೌಟೇಲಾ ಇನ್ಸ್​ಟಾಗ್ರಾಂನಲ್ಲಿ ಪೋಸ್ಟ್​ ಮಾಡಿದ್ದು ರಿಷಭ್​ ಪಂತ್​​ಗಾಗಿ ಪ್ರಾರ್ಥಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಈ ಹಿಂದೆ ರಿಷಭ್​ ಆಟವಾಡುತ್ತಿದ್ದ ಎಲ್ಲಾ ಕ್ರಿಕೆಟ್​ ಮ್ಯಾಚ್​ಗಳಿಗೆ ಭೇಟಿ ನೀಡುತ್ತಿದ್ದ ರೌಟೇಲಾ ಅನೇಕ ಬಾರಿ ಟ್ರೋಲ್​ ಆಗಿದ್ದರು
ರಿಷಬ್ ಪಂತ್ ಅವರನ್ನು ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹರಿದ್ವಾರ ಎಸ್ಪಿ (ಗ್ರಾಮೀಣ), ಸ್ವಪನ್ ಕಿಶೋರ್ ತಿಳಿಸಿದ್ದಾರೆ. ಏತನ್ಮಧ್ಯೆ, ಬಾಲಿವುಡ್ ನಟಿ ಊರ್ವಶಿ ರೌಟೇಲಾ ಅವರು “ಪ್ರಾರ್ಥನೆ” ಎಂಬ ಶೀರ್ಷಿಕೆಯೊಂದಿಗೆ ಬಿಳಿ ಉಡುಗೆ ಧರಿಸಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಅವರು ಶೀರ್ಷಿಕೆಯಲ್ಲಿ ಬಿಳಿ ಹೃದಯ ಮತ್ತು ಬಿಳಿ ಪಾರಿವಾಳವನ್ನು ಕೂಡ ಸೇರಿಸಿದ್ದಾರೆ.
ಹರಿದ್ವಾರ ಜಿಲ್ಲೆಯ ಮಂಗಳೌರ್ ಮತ್ತು ನರ್ಸನ್ ನಡುವೆ ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ಅಪಘಾತಕ್ಕೀಡಾಗಿದ್ದು ರೂರ್ಕಿ ಸಿವಿಲ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಅವರನ್ನು ಡೆಹ್ರಾಡೂನ್​ನ ಮ್ಯಾಕ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕಾರಿನಲ್ಲಿ ಒಬ್ಬರೇ ಇದ್ದ ಪಂತ್ ಬೆನ್ನು, ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ.
ಘಟನಾ ಸ್ಥಳದ ಛಾಯಾಚಿತ್ರಗಳ ಪ್ರಕಾರ, ಕಾರು ಕೆಟ್ಟದಾಗಿ ಸುಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, “ವಾಹನ ಅಪಘಾತದಲ್ಲಿ ಗಾಯಗೊಂಡಿರುವ ಕ್ರಿಕೆಟಿಗ ರಿಷಬ್ ಪಂತ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದೇನೆ. ಅವರ ಚಿಕಿತ್ಸೆಗೆ ಸಾಧ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಹೇಳಿದ್ದಾರೆ.
A post shared by Urvashi Rautela (@urvashirautela)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 6 =
Remember me
