ಮುಂಬೈ:ಶನಿವಾರ ಸಂಜೆ ಕಾರು ಅಪಘಾತದಲ್ಲಿ ಗಾಯಗೊಂಡ ಬಾಲಿವುಡ್​ ಹಿರಿಯ ನಟಿ ಶಬಾನಾ ಅಜ್ಮಿ ಅವರು ಬೇಗ ಗುಣಮುಖರಾಗಲೆಂದು ಟ್ವೀಟ್​ ಮಾಡಿ ನಟಿ ಊರ್ವಶಿ ರೌಟೇಲಾ ನೆಟ್ಟಿಗರ ಟೀಕೆಗೆ ಗುರಿಯಾಗಿದ್ದಾರೆ.
ಅರೇ.. ಊರ್ವಶಿಯವರನ್ನು ಟೀಕಿಸುವಂತಹ ತಪ್ಪೇನು ಮಾಡಿದರು? ಟ್ವೀಟ್​ ಮೂಲಕ ಪ್ರಾರ್ಥಿಸಿದ್ದೇ ತಪ್ಪಾ ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಆದರೆ, ಟ್ವೀಟ್​ ಮಾಡಿರುವ ಊರ್ವಶಿ ಎಡವಟ್ಟೊಂದನ್ನು ಮಾಡಿಕೊಂಡಿದ್ದಾರೆ. ಅದೇನೆಂದರೆ ಪ್ರಧಾನಿ ಮೋದಿ ಮಾಡಿರುವ ಟ್ವೀಟ್​ ಅನ್ನೇ ಯಥಾವತ್ತಾಗಿ ನಕಲು ಮಾಡಿದ್ದಾರೆ.
ಶಬಾನಾ ಅಜ್ಮಿ ಅವರು ಅಪಘಾತಕ್ಕೀಡಾಗಿ ಗಾಯಗೊಂಡಿದ್ದಾರೆಂಬ ಸುದ್ದಿ ಆತಂಕಕ್ಕೆ ದೂಡಿದೆ. ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಟ್ವೀಟ್​ ಮಾಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಊರ್ವಶಿ ಕೂಡ ಯಥಾವತ್ತಾಗಿ ಟ್ವೀಟ್​ ಕಾಪಿ ಮಾಡಿ ಪೇಸ್ಟ್​ ಮಾಡಿದ್ದಾರೆ.
ಇದನ್ನು ಗಮನಿಸಿರುವ ನೆಟ್ಟಿಗರು ಎರಡು ಟ್ವೀಟ್​ಗಳ ಸ್ಕ್ರೀನ್​ಶಾಟ್​ ಎಡಿಟ್​ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಸುಲಭವಾಗಿ ಪ್ರಧಾನಿ ಮೋದಿ ಅವರ ಟ್ವೀಟ್​ ಅನ್ನು ಕಾಪಿ, ಪೇಸ್ಟ್​ ಮಾಡಿದ್ದಾರೆ ಎಂದು ಊರ್ವಶಿ ಕಾಲೆಳೆದಿದ್ದಾರೆ.(ಏಜೆನ್ಸೀಸ್​)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + fourteen =
Remember me
