ಬೆಂಗಳೂರು:ಇಷ್ಟು ದಿನ ಅಮೆರಿಕ ತೆರಳಲು ಬೇಕಾಗಿದ್ದ ವೀಸಾ ಪಡೆದುಕೊಳ್ಳಲು ಚೆನ್ನೈನಲ್ಲಿರುವ ಅಮೆರಿಕ ಕಾನ್ಸುಲೇಟ್ ಕಚೇರಿಗೆ(America Consulates) ತೆರಳಬೇಕಾಗಿತ್ತು. ಆದರೆ ಇನ್ನು ಮುಂದೆ ಬೆಂಗಳೂರಿನಲ್ಲಿಯೇ ಅಮೆರಿಕ ವಿಸಾ ಪಡೆದುಕೊಳ್ಳಬಹುದಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸದ ಸಂದರ್ಭದಲ್ಲಿ ಬೆಂಗಳೂರು ಮತ್ತು ಅಹಮದಾಬಾದ್​​ನಲ್ಲಿ ಕಾನ್ಸುಲೇಟ್ ಕಚೇರಿ ಆರಂಭಿಸುವುದಾಗಿ ಅಮೆರಿಕ ತಿಳಿಸಿದೆ.
ಬೆಂಗಳೂರಿನಲ್ಲಿ ಯುಎಸ್ ಕಾನ್ಸುಲೇಟ್ ಕಚೇರಿ ತೆರೆಯುವ ಅಮೆರಿಕ ಸರ್ಕಾರದ ನಿರ್ಧಾರಕ್ಕೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹರ್ಷ ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ನಗರಕ್ಕೆ ನೀಡಿರುವ ಮಹತ್ವವೇ ಇದಕ್ಕೆ ಕಾರಣ. ಅವರ ನಾಯಕತ್ವದಿಂದ ನಗರಕ್ಕೆ ಮತ್ತಷ್ಟು ಲಾಭವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ:ಈತನ ಬೈಕ್ ಬೆಲೆ 85 ಸಾವಿರ ರೂ.; ಕಟ್ಟಬೇಕಿದೆ 70,000 ರೂ. ದಂಡ!
ಐಟಿ ಸಿಟಿ ಬೆಂಗಳೂರಿನಲ್ಲಿ ಯುಎಸ್ ಕಾನ್ಸುಲೇಟ್ ಕಚೇರಿ ತೆರೆಯಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಈ ಹಿಂದೆ ಹಲವು ಮನವಿಗಳನ್ನು ಕೇಂದ್ರ ಸರ್ಕಾರ ಮತ್ತು ಅಮೆರಿಕ ಆಡಳಿತ ವಿಭಾಗಕ್ಕೆ ಸಲ್ಲಿಸಿದ್ದರು. 2019ರ ನವೆಂಬರ್ ತಿಂಗಳಲ್ಲಿ ಕೇಂದ್ರ ವಿದೇಶಾಂಗ ಖಾತೆ ಸಚಿವೆ ಜೈ ಶಂಕರ್, 2020 ಮಾರ್ಚ್ ತಿಂಗಳಲ್ಲಿ ಅಮೆರಿಕದ ಅಂದಿನ ಭಾರತೀಯ ರಾಯಭಾರಿ ಕೆನೆತ್ ಜಸ್ಟರ್​ಗೆ ಮನವಿ ನೀಡಿದ್ದರು.
ಬೆಂಗಳೂರಿನಲ್ಲಿ ಕಾನ್ಸುಲೇಟ್ ಕಚೇರಿ ತೆರೆಯಬೇಕು ಎನ್ನುವುದು ನಮ್ಮ ಬೇಡಿಕೆಯೂ ಆಗಿದ್ದು, ಇದನ್ನು ಅಮೆರಿಕ ಸರ್ಕಾರದೊಂದಿಗೆ ಚರ್ಚಿಸಿ, ಅನುಷ್ಠಾನಗೊಳಿಸಲು ಯತ್ನಿಸಲಾಗುವುದು ಎಂದು ವಿದೇಶಾಂಗ ಸಚಿವ ಜೈ ಶಂಕರ್ ಕೂಡ ಭರವಸೆ ನೀಡಿದ್ದರು ಎಂದು ಸಂಸದ ತೇಜಸ್ವಿ ಸೂರ್ಯ ತೀಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − fifteen =
Remember me
