ನವದೆಹಲಿ:ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರ ಎರಡು ದಿನಗಳ ಭಾರತ ಪ್ರವಾಸದಲ್ಲಿ ಒಂದು ದಿನ ಇಂದು ಮುಕ್ತಾಯವಾಗಿದೆ. ಮೊದಲ ದಿನವೇ ಸಬರಮತಿ ಆಶ್ರಮ, ನಮಸ್ತೆ ಟ್ರಂಪ್​ ಕಾರ್ಯಕ್ರಮ ಮತ್ತು ತಾಜ್​ ಮಹಲ್​ ಭೇಟಿ ನೀಡಿ ದೆಹಲಿಗೆ ತೆರಳಿದ ಟ್ರಂಪ್​ ಮಂಗಳವಾರ ರಾತ್ರಿ ಅಮೆರಿಕಕ್ಕೆ ಮರಳುವ ಮುನ್ನ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಅದರ ವೇಳಾಪಟ್ಟಿ ಈ ಕೆಳಕಂಡಂತಿದೆ.
ಮಂಗಳವಾರ ಬೆಳಗ್ಗೆ 10 ಗಂಟೆ ಟ್ರಂಪ್ ಗೌರವಾರ್ಥ ರಾಷ್ಟ್ರಪತಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಬಳಿಕ 10:45ಕ್ಕೆ ರಾಜ್​ಘಾಟ್​ಗೆ ಟ್ರಂಪ್ ದಂಪತಿ ಭೇಟಿ ನೀಡಿ ಮಹಾತ್ಮ ಗಾಂಧಿ ಸಮಾಧಿಗೆ ಗೌರವ ಸಲ್ಲಿಸಲಿದ್ದಾರೆ. ಬಳಿಕ 11:30ಕ್ಕೆ ದೆಹಲಿಯ ಹೈದರಾಬಾದ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ರಂಪ್ ದ್ವಿಪಕ್ಷೀಯ ಮಾತುಕತೆ ನಂತರ ಜಂಟಿ ಸುದ್ದಿಗೋಷ್ಠಿ ನಡೆಯಲಿದೆ.
ಇದರ ನಡುವೆ ದೆಹಲಿಯ ಸರ್ಕಾರಿ ಶಾಲೆಯೊಂದಕ್ಕೆ ಮೆಲನಿಯಾ ಟ್ರಂಪ್​ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಅಮೆರಿಕ ರಾಯಭಾರ ಕಚೇರಿಯಲ್ಲಿ ಸಿಇಒಗಳ ದುಂಡುಮೇಜಿನ ಸಭೆ ನಡೆಯಲಿದೆ. ಬಳಿಕ ಸಂಜೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರನ್ನು ಟ್ರಂಪ್​ ಭೇಟಿ ಮಾಡಲಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ರಾಷ್ಟ್ರಪತಿ ಭವನದಲ್ಲಿ ಔತಣಕೂಟದಲ್ಲಿ ಪಾಲ್ಗೊಂಡ ಬಳಿಕ ರಾತ್ರಿ 10ಕ್ಕೆ ಟ್ರಂಪ್​ ಅಮೆರಿಕಗೆ ನಿರ್ಗಮಿಸಲಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
