ವಾಷಿಂಗ್ಟನ್​:ಪ್ರಾದೇಶಿಕ ಮತ್ತು ಜಾಗತಿಕ ಶಕ್ತಿಯಾಗಿ ಪ್ರವರ್ಧಮಾನಕ್ಕೆ ಬಂದಿರುವ ಭಾರತವನ್ನು ಸ್ವಾಗತಿಸುವುದಾಗಿ ಅಮೆರಿಕ ಹೇಳಿದೆ. ಅಷ್ಟೇ ಅಲ್ಲ, ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ಮುಂದಿನ ಅವಧಿಯಲ್ಲಿ ಭಾರತದ ಜತೆಗೆ ನಿಕಟವಾಗಿ ಕೆಲಸ ಮಾಡುವುದಕ್ಕೂ ಎದುರು ನೋಡುತ್ತಿರುವುದಾಗಿ ಅದು ಹೇಳಿದೆ. ನವದೆಹಲಿಯಲ್ಲಿ 2+2 ಸಚಿವರ ಮಟ್ಟದ ಸಭೆಗೂ ಮುಂಚಿತವಾಗಿ ಅಮೆರಿಕದ ಸ್ಟೇಟ್ ಡಿಪಾರ್ಟ್​ಮೆಂಟ್ ಈ ಹೇಳಿಕೆಯ ಫ್ಯಾಕ್ಟ್​ಶೀಟ್​ ಪ್ರಕಟಿಸಿರುವುದು ಗಮನಾರ್ಹ.
ಜಗತ್ತಿನ ಅತಿದೊಡ್ಡ ಮತ್ತು ಹಳೆಯ ಪ್ರಜಾಪ್ರಭುತ್ವಗಳು ಪುರಾತನವಾದ ಪ್ರಜಾಸತ್ತಾತ್ಮಕ ಸಂಪ್ರದಾಯಗಳನ್ನು ಪಾಲಿಸಿಕೊಂಡು ಬರುತ್ತಿರುವ ರಾಷ್ಟ್ರಗಳಾಗಿವೆ ಭಾರತ ಮತ್ತು ಅಮೆರಿಕ. ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧ ಬಲಗೊಳ್ಳುತ್ತ ಸಾಗುತ್ತಿದ್ದು, ಅನೇಕ ಮೌಲ್ಯಗಳನ್ನು ಹಂಚಿಕೊಂಡು ಮುನ್ನಡೆಯುತ್ತಿವೆ. ಅಲ್ಲದೆ, ಉಚಿತ- ಮುಕ್ತ ಇಂಡೋ-ಪೆಸಿಫಿಕ್​ ಸ್ಥಾಪಿಸುವ ಉದ್ದೇಶದೊಂದಿಗೆ ಕೆಲಸ ಮಾಡುತ್ತಿವೆ ಎಂದು ಅದು ಹೇಳಿದೆ.
ಇದನ್ನೂ ಓದಿ:ಕಾಳಿ ಮಾತೆಯನ್ನು ಒಲಿಸೋದಕ್ಕಾಗಿ ನಾಲಿಗೆಯನ್ನೇ ಕತ್ತರಿಸಿ ಪೂಜೆಗಿಟ್ಟ!
ಅಮೆರಿಕದ ಸೆಕ್ರೆಟರಿ ಆಫ್ ಸ್ಟೇಟ್​ ಮೈಕ್ ಪಾಂಪಿಯೋ ಮತ್ತು ಡಿಫೆನ್ಸ್ ಸೆಕ್ರಟರಿ ಮಾರ್ಕ್ ಎಸ್ಪರ್​ ಅವರು ಇಂದು ಬೆಳಗ್ಗೆಯೇ ನವದೆಹಲಿಗೆ ಆಗಮಿಸಿದ್ದಾರೆ. ಅವರು ಇಂದು ಮತ್ತು ನಾಳೆ ನವದೆಹಲಿಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್​.ಜೈಶಂಕರ್​ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ 2+2 ಸಭೆಯಲ್ಲಿ ಭಾಗಿಯಾಗುತ್ತಿದ್ದಾರೆ. (ಏಜೆನ್ಸೀಸ್)
ಭಾರತದಲ್ಲಿ 2+2 ಸಚಿವಾಲಯ ಮಟ್ಟದ ಸಭೆಗೆ ಸಿದ್ಧತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
