ನವದೆಹಲಿ:ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಕನೌಜ್ ಲೋಕಸಭಾ ಚುನಾವಣೆಯಲ್ಲಿ ಗೆದ್ದ ಹಿನ್ನೆಲೆಯಲ್ಲಿ ಕರ್ಹಾಲ್ ವಿಧಾನಸಭಾ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ರಾಜೀನಾಮೆಯೊಂದಿಗೆ ಅಖಿಲೇಶ್ ಯಾದವ್ ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನವನ್ನೂ ತ್ಯಜಿಸಲಿದ್ದಾರೆ.
ಇದನ್ನೂ ಓದಿ:ಅವನ್ಯಾವನೋ ದರ್ಶನ್ ಹೀಗೇ ಸಾಯಲಿ, ಅವಳೂ ಸಾಯಬೇಕು’!: ಕೊಲೆಯಾದ ರೇಣುಕಾಸ್ವಾಮಿ ಹೆತ್ತವರ ಹಿಡಿಶಾಪ
ಉತ್ತರ ಪ್ರದೇಶ ರಾಜ್ಯ ವಿಧಾನಸಭೆಯಲ್ಲಿ ಅಖಿಲೇಶ್ ಯಾದವ್ ಅವರ ಬದಲಾಗಿ ವಿರೋಧ ಪಕ್ಷದ ನಾಯಕ ಯಾರಾಗಲಿದ್ದಾರೆ ಮತ್ತು ಅವರ ಬದಲಾಗಿ ವಿಧಾನಸಭಾ ಚುನಾವಣೆಗೆ ಆ ಕ್ಷೇತ್ರದಿಂದ ಯಾರು ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ಇನ್ನೂ ಪಕ್ಷ ನಿರ್ಧಾರ ತೆಗೆದುಕೊಂಡಿಲ್ಲ.
ಈ ಹಿಂದೆಯೇ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕನೌಜ್​ ಲೋಕಸಭೆ ಸ್ಥಾನವನ್ನು ಉಳಿಸಿಕೊಳ್ಳುವ ಸುಳಿವು ನೀಡಿದ್ದರು. ಎರಡು ಕ್ಷೇತ್ರಗಳ ಪಕ್ಷದ ನಾಯಕರು, ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಎಸ್​ಪಿ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ಅಖಿಲೇಶ್ ಯಾದವ್ ಅವರು ವಿಧಾನಸಭೆಗೆ ರಾಜೀನಾಮೆ ನೀಡುವ ಮೂಲಕ ತಮ್ಮ ಸಂಸದ ಸ್ಥಾನವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಕರ್ಹಾಲ್ ಸ್ಥಾನಕ್ಕೆ ಅಖಿಲೇಶ್ ಯಾದವ್ ರಾಜೀನಾಮೆ ನೀಡಿದ ನಂತರ, ಈ ಸ್ಥಾನದಿಂದ ಯಾರು ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬುದರ ಕುರಿತು ಇನ್ನೂ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಮೈನ್‌ಪುರಿ ಮಾಜಿ ಸಂಸದ ತೇಜ್ ಪ್ರತಾಪ್ ಯಾದವ್ ಅವರನ್ನು ಕರ್ಹಾಲ್ ವಿಧಾನಸಭೆಯಿಂದ ಕಣಕ್ಕಿಳಿಸಬಹುದು ಎಂಬ ಚರ್ಚೆ ಕೂಡ ಕೇಳಿಬರುತ್ತಿದೆ.
ಲೋಕಸಭೆ ಚುನಾವಣೆಯಲ್ಲಿ 37 ಸ್ಥಾನಗಳನ್ನು ಗಳಿಸುವ ಮೂಲಕ ದೇಶದ 3ನೇ ಅತಿ ಹೆಚ್ಚು ಸ್ಥಾನಗಳನ್ನು ಪಡೆದ ರಾಜಕೀಯ ಪಕ್ಷವಾಗಿ ಸಮಾಜವಾದಿ ಪಾರ್ಟಿ ಗುರುತಿಸಿಕೊಂಡಿದೆ.
ಠಾಣೆಯಲ್ಲಿರುವ ಕೊಲೆ ಆರೋಪಿ ದರ್ಶನ್​ಗೆ ದೊನ್ನೆ ಬಿರಿಯಾನಿ ತರಿಸಿದ ಪೊಲೀಸರು: ಅಬ್ಬಾ.. ಇದೆಂತಾ ರಾಜಮರ್ಯಾದೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
