ಉತ್ತರಪ್ರದೇಶ:ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸರ್ಕಾರದ ಸಂಪುಟ ಸಚಿವರಾದ ನಂದ ಗೋಪಾಲ್ ಗುಪ್ತಾ ಅಲಿಯಾಸ್​ ನಂದಿ ಅವರಿಗೆ ಏಪ್ರಿಲ್​​ 19 ರಂದು ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ ಬಂದಿದ್ದು, ಘಟನೆ ನಡೆದ ಎರಡು ವಾರಗಳ ಬಳಿಕ ಕರೆ ಮಾಡಿದ ಆರೋಪಿ ವಿರುದ್ಧ ಎಫ್​ಐಆರ್​ ದಾಖಲಾಗಿದೆ.
ಉತ್ತರ ಪ್ರದೇಶದ ಕೈಗಾರಿಕಾ ಅಭಿವೃದ್ಧಿ, ರಫ್ತು ಉತ್ತೇಜನ, ಎನ್‌ಆರ್‌ಐ ಮತ್ತು ಹೂಡಿಕೆ ಉತ್ತೇಜನ ಸಚಿವರಾದ ನಂದ ಗೋಪಾಲ್ ಗುಪ್ತಾ ಅವರ ಮೊಬೈಲ್ ಫೋನಿಗೆ ನೇರವಾಗಿ ಕೊಲೆ ಬೆದರಿಕೆಯ ಕರೆ ಬಂದಿತ್ತು ಎನ್ನಲಾಗಿದೆ. ಏಪ್ರಿಲ್ 19 ರಂದು ಸಂಜೆ 5.55 ಮತ್ತು 6.05 ರ ಸುಮಾರಿಗೆ ಸಚಿವರಿಗೆ ಎರಡು ವಿಭಿನ್ನ ಫೋನ್ ನಂಬರ್​ಗಳಿಂದ ಕೊಲೆ ಬೆದರಿಕೆಗಳು ಬಂದಿವೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.
ಈ ವೇಳೆ ಗುಪ್ತಾ ಅವರ ಆಪ್ತ ಸಹಾಯಕ ಶೈಲೇಂದ್ರ ಸಿಂಗ್ ಅಪರಿಚಿತ ಕರೆಯನ್ನು ಸ್ವೀಕರಿಸಿ ಮಾತನಾಡಿದ್ದರು ಎಂದು ಇನ್ಸ್‌ಪೆಕ್ಟರ್ ಅಖಿಲೇಶ್ ಮಿಶ್ರಾ ತಿಳಿಸಿದ್ದಾರೆ. ಆದರೆ ಘಟನೆ ನಡೆದ ಸುಮಾರು ಎರಡು ವಾರಗಳ ನಂತರ ಮೇ 3 ರಂದು ಭಾರತೀಯ ದಂಡ ಸಂಹಿತೆ ಸೆಕ್ಷನ್ 507 ರ ಅಡಿಯಲ್ಲಿ ಅಪರಿಚಿತ ಕರೆ ಮೂಲಕ ಜೀವ ಬೆದರಿಕೆ ಹಾಕಿದ್ದಕ್ಕಾಗಿ ಲಕ್ನೋ ಹಜರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ:ಜಾಗದ ಜಗಳಕ್ಕೆ ಹಾಡಹಗಲೇ 6 ಜನರನ್ನು ಗುಂಡಿಟ್ಟು ಕೊಂದ ಕಿರಾತಕರು
ಇನ್ನೂ ಅಪರಿಚಿತ ಕರೆ ಮಾಡಿದವರ ಕರೆ ವಿವರಗಳ ದಾಖಲೆಗಳನ್ನು ಪತ್ತೆಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಚಿವರು ಎಫ್‌ಐಆರ್‌ನಲ್ಲಿ ಪೊಲೀಸರನ್ನು ಒತ್ತಾಯಿಸಿದ್ದು, ಶೀಘ್ರದಲ್ಲೇ ಆರೋಪಿಯನ್ನು ಕಂಡು ಹಿಡಿಯುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.
55 ವರ್ಷದ ವ್ಯಕ್ತಿಯನ್ನು ಮದುವೆಯಾದ್ಲು 25ರ ಯುವತಿ…!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 2 =
Remember me
