ಲಕ್ನೋ: ಉತ್ತರ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರು ಪೊಲೀಸರ ಗುಂಡಿನ ದಾಳಿಯಲ್ಲಿ ಮೃತಪಟ್ಟಿಲ್ಲ. ಬದಲಾಗಿ ಅವರ ನಡುವೆ ಗಲಾಟೆ ನಡೆದು ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಪ್ರಶ್ನೆಗೆ ಅವರು ಉತ್ತರಿಸಿದರು. ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದವರಲ್ಲಿ 20 ಮಂದಿ ಮೃತಪಟ್ಟಿದ್ದಾರೆ. ಪ್ರತಿಪಕ್ಷಗಳು ಇವರನ್ನು ಪೊಲೀಸರು ಗುಂಡು ಹಾರಿಸಿ ಸಾಯಿಸಿದ್ದಾರೆ ಎನ್ನುತ್ತಿವೆ. ಆದರೆ ಅವರ ನಡುವೆಯೇ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಸಾಯುವ ಉದ್ದೇಶ ಹೊಂದಿ ಮನೆಯಿಂದ ಹೊರಗೆ ಬಂದವರನ್ನು ತಡೆಯುವುದು ಹೇಗೆ ಸಾಧ್ಯ. ತೊಂದರೆ ಉಂಟುಮಾಡುವವರು ಇನ್ನೊಬ್ಬ ತೊಂದರೆ ಉಂಟುಮಾಡುವವರ ಗುಂಡಿನ ದಾಳಿಯಿಂದ ಮೃತಪಟ್ಟರು. ಈ ಪ್ರಕರಣದಲ್ಲಿ ಪೊಲೀಸರನ್ನು ಟೀಕಿಸುವ ಬದಲು ಅವರನ್ನು ಮೆಚ್ಚಬೇಕು ಎಂದು ಹೇಳಿದರು.
ಪೊಲೀಸರ ಗುಂಡಿನಿಂದ ಒಬ್ಬರು ಸತ್ತಿಲ್ಲ. ಪೌರತ್ವ ಕಾಯ್ದೆ ವಿರೋಧಿ ನಡೆಯುತ್ತಿರುವ ಪ್ರತಿಭಟನೆ ದೊಡ್ಡ ಪಿತೂರಿ. ಇದಕ್ಕೆ ಹಲವರು ಹಣಕಾಸಿನ ಸಹಾಯ ಮಾಡುತ್ತಿದ್ದಾರೆ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + twenty =
Remember me
