ಲಕ್ನೋ:ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಉತ್ತರ ಪ್ರದೇಶದ 10 ನೇ ತರಗತಿಯ ಪರೀಕ್ಷೆಗಳನ್ನು (ಬೋರ್ಡ್​ ಎಕ್ಸಾಮ್ಸ್​) ರದ್ದು ಮಾಡಲಾಗಿದೆ.
ಉತ್ತರ ಪ್ರದೇಶ ಸೆಕೆಂಡರಿ ಎಜುಕೇಷನ್ ಕೌನ್ಸಿಲ್ ಈ ನಿರ್ಧಾರ ಪ್ರಕಟಿಸಿದೆ. ಇನ್ನು 12 ನೇ ತರಗತಿ ಪರೀಕ್ಷೆಗಳನ್ನು ಕೇವಲ 90 ನಿಮಿಷ (ಪ್ರತಿ ಪರೀಕ್ಷೆ) ನಡೆಸಲು ತೀರ್ಮಾನಿಸಲಾಗಿದೆ. ಸಾಧ್ಯವಾದರೆ ಜುಲೈನಲ್ಲಿ ಈ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ.
ಹತ್ತನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದ್ದರಿಂದ 29.90 ಲಕ್ಷ ವಿದ್ಯಾರ್ಥಿಗಳು ನೇರವಾಗಿ ಮುಂದಿನ ತರಗತಿ ಪ್ರವೇಶಕ್ಕೆ ಅರ್ಹತೆ ಪಡೆಯಲಿದ್ದಾರೆ ಎಂದು ಉತ್ತರ ಪ್ರದೇಶ ಡಿಸಿಎಂ ಸಹ ಆಗಿರುವ ಶಿಕ್ಷಣ ಸಚಿವ ದಿನೇಶ್ ಶರ್ಮಾ ಹೇಳಿದ್ದಾರೆ.
ಇದನ್ನೂ ಓದಿ:ಕೋವಿಡ್​ನಿಂದ ಅನಾಥರಾದ ಮಕ್ಕಳಿಗೆ ಮಾಸಾಶನ, ಉಚಿತ ಶಿಕ್ಷಣ, ಆರೈಕೆ: ಬಾಲಸೇವಾ ಯೋಜನೆ ಘೋಷಿಸಿದ ಸಿಎಂ
ಕೇಂದ್ರದ ಸಿಬಿಎಸ್​ಸಿ ಕೂಡ ದೇಶಾದ್ಯಂತ ಹತ್ತನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶರ್ಮಾ ಹೇಳಿದ್ದಾರೆ.
ಇನ್ನೊಂದೆಡೆ ಉತ್ತರ ಪ್ರದೇಶದಲ್ಲಿ ಶನಿವಾರ ಹೊಸದಾಗಿ 2204 ಜನರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದೆ. 159 ಜನ ಮೃತಪಟ್ಟಿದ್ದಾರೆ. ಒಟ್ಟು 20 ಸಾವಿರ ಜನ ಮೃತಪಟ್ಟಿದ್ದಾರೆ. ಒಟ್ಟು 16,86,138 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಕೋವಿಡ್​ನಿಂದ ಅನಾಥರಾದ ಮಕ್ಕಳಿಗೆ ಸಿಗಲಿದೆ 10 ಲಕ್ಷ ರೂಪಾಯಿ!; ಅಪ್ಪ-ಅಮ್ಮನಿಲ್ಲದ ಮಕ್ಕಳಿಗಾಗಿ ಪಿಎಂ ಕೇರ್ಸ್​

ಎಂಟು‌ ಸಾವಿರ ಶಿಕ್ಷಕರಿಗೆ ಹಿಂಬಡ್ತಿ ಬಗ್ಗೆ ಯಾವುದೇ ಶಿಕ್ಷಕರು‌ ಆತಂಕ ಪಡಬೇಕಿಲ್ಲ: ಸಚಿವ ಸುರೇಶ್ ಕುಮಾರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − fifteen =
Remember me
