ಉತ್ತರ ಪ್ರದೇಶ:ಸದಾ ಒತ್ತಡದಲ್ಲಿ ಕೆಲಸ ನಿರ್ವಹಿಸುವ ಕ್ಷೇತ್ರಗಳಲ್ಲಿ ಪೊಲೀಸ್ ಇಲಾಖೆಯೂ ಒಂದು. ಅದರಲ್ಲೂ ಪೊಲೀಸ್ ಇಲಾಖೆಯಲ್ಲಿರುವ ಮಹಿಳಾ ಪೊಲೀಸರಂತೂ ತಮ್ಮ ಮನೆ ಹಾಗೂ ಇಲಾಖೆಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಕಾರ್ಯ ನಿರ್ವಹಿಸಬೇಕಾಗುತ್ತದೆ. ಅಂತೆಯೇ ಮಹಿಳಾ ಪೊಲೀಸರಿಗೆ ಪುಟ್ಟ ಮಕ್ಕಳಿದ್ದರೂ, ಅವರನ್ನು ಬಿಟ್ಟು ಬಂದು ತಮ್ಮ ನಿತ್ಯದ ಕರ್ತವ್ಯ ನಿರ್ವಹಿಸಬೇಕಾದ ಒತ್ತಡ ಇರುತ್ತದೆ.
ಇದೀಗ ಉತ್ತರ ಪ್ರದೇಶದ ಮುರಾದಾಬಾದ್ ಎಂಬಲ್ಲಿ ಮಹಿಳಾ ಪೊಲೀಸ್ ಕಾನ್​​ಸ್ಟೇಬಲ್ ಒಬ್ಬರು ತಮ್ಮ 6 ತಿಂಗಳ ಮಗುವನ್ನು ಎತ್ತಿಕೊಂಡು ಟ್ರಾಫಿಕ್​ನಲ್ಲಿ ಕೆಲಸ ಮಾಡಿದ್ದಾರೆ. ಮಾರ್ಗ ಮಧ್ಯೆ ತಮ್ಮ ಮಗುವಿನೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ವಿಡಿಯೋ ಇದೀಗ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನು ನೋಡಿದ ನೆಟ್ಟಿಗರು ಮಹಿಳಾ ಪೊಲೀಸ್ ತನ್ನ ಕರ್ತವ್ಯದಲ್ಲಿ ತೋರಿದ ದಕ್ಷತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಪೊಲೀಸ್ ಇಲಾಖೆಯ ವಿರುದ್ಧ ಕಿಡಿಕಾರಿದ್ದಾರೆ.
मुरादाबाद में 6 महीने की बच्ची के साथ ड्यूटी करती दिखी महिला|pic.twitter.com/6BiEgjsbED— Priya singh (@priyarajputlive)November 27, 2022
मुरादाबाद में 6 महीने की बच्ची के साथ ड्यूटी करती दिखी महिला|pic.twitter.com/6BiEgjsbED
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಮುರಾದಾಬಾದ್ ಪೊಲೀಸ್ ಇಲಾಖೆ ಸ್ಪಷ್ಟನೆಯೊಂದನ್ನು ನೀಡಿದೆ. ಮಹಿಳಾ ಪೊಲೀಸ್ ಕಾನ್​​​ಸ್ಟೇಬಲ್ ಈಗಾಗಲೇ ಹತ್ತಿರದ ಠಾಣೆಗೆ ವರ್ಗಾವಣೆಯಾಗಿ ಹೋಗಿದ್ದಾರೆ. ಈ ನಡುವೆ ತಾತ್ಕಾಲಿಕವಾಗಿ ಮಹಿಳಾ ಕಾನ್ಸ್​​ಸ್ಟೇಬಲ್ ಟ್ರಾಫಿಕ್​ನಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿ ಬಂದಿದೆ. ಈ ವೇಳೆ ಅವರು ಮಗುವನ್ನು ಕರೆದುಕೊಂಡು ಬಂದಿದ್ದಾರೆ. ಪ್ರಸ್ತುತ ಇವರು ಪೊಲೀಸ್ ಕಚೇರಿಯಲ್ಲೇ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
